Featured StoryMadikeri

ಬ್ರೇಕಿಂಗ್ ನ್ಯೂಸ್: ಕನ್ನಡ ರಾಜ್ಯೋತ್ಸವ ದಿನದಂದು ಕನ್ನಡ ಚಿತ್ರ ಪ್ರದರ್ಶಿಸದ ಚಿತ್ರಮಂದಿರದ ಮಾಲೀಕರ ವಿರುದ್ಧ ಪ್ರತಿಭಟನೆ

ಕನ್ನಡ ರಾಜ್ಯೋತ್ಸವ ದಿನದಂದು ಕನ್ನಡ ಚಿತ್ರ ಪ್ರದರ್ಶಿಸದ ಚಿತ್ರಮಂದಿರದ ಮಾಲೀಕರ ವಿರುದ್ಧ ಪ್ರತಿಭಟನೆ ಕುಶಾಲನಗರ ಕನ್ನಡಾಭಿಮಾನಿಗಳು ಪ್ರತಿಭಟನೆ ನಡೆಸಿದರು.

ಕುಶಾಲನಗರದ ಕೂರ್ಗ್ ಸಿನಿಪ್ಲೆಕ್ಸ್ ಮುಂಭಾಗ ಪ್ರತಿಭಟನೆ ನಡೆಸುತ್ತಿರುವ ಕುಶಾಲನಗರ ಕನ್ನಡ ಅಭಿಮಾನಿಗಳು ತಮಿಳು ಚಿತ್ರ ನಿಲ್ಲಿಸುವಂತೆ ಆಗ್ರಹಿಸಿದ್ದಾರೆ. ನಂತರ ಪ್ರತಿಭಟನಾಕಾರರು ಸಿನಿಮಾ ಮಂದಿರದ ಒಳಗೆ ನುಗ್ಗಿದರು.

ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಸ್ಥಿತಿ ನಿಭಾಯಿಸಿದ್ದಾರೆ. ಪ್ರತಿಭಟನಾಕಾರರ ಆಗ್ರಹದಂತೆ ತಮಿಳು ಚಿತ್ರ ಪ್ರದರ್ಶನ ನಿಲ್ಲಿಸಲಾಯಿತು.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button