ರಾಜ್ಯದ ಜೈಲುಗಳು ಭಯೋತ್ಪಾದನೆ ಟ್ರೈನಿಂಗ್ ಕೊಡುವ ಕೇಂದ್ರಗಳಾಗಿ ಬದಲಾಗಿವೆ ಎಂದು ಬೆಂಗಳೂರಿನಲ್ಲಿ ಪರಿಷತ್ ಸದಸ್ಯ ಕೋಟಾ ಶ್ರೀನಿವಾಸ ಪೂಜಾರಿ ಆಕ್ರೋಶ ಹೊರ ಹಾಕಿದ್ದಾರೆ.
ಹಣ ಕೊಟ್ಟರೆ ಏನೂ ವ್ಯವಸ್ಥೆ ಬೇಕಾದರೆ ಸಿಗುತ್ತದೆ. ಅಧಿಕಾರಿಗಳು ಇದರಲ್ಲಿ ಭಾಗಿಯಾಗುತ್ತಿದ್ದಾರೆ. ಇದು ಕೇವಲ ಹಿಂಡಲಗಾ ಜೈಲಿನಲ್ಲಿ ಮಾತ್ರ ಅಲ್ಲ ರಾಜ್ಯದ ಬಹುತೇಕ ಎಲ್ಲಾ ಜೈಲಿನಲ್ಲಿ ಇದೇ ವ್ಯವಸ್ಥೆ ಇದೆ. ಬೆಂಗಳೂರಿನ ಜೈಲಿನಲ್ಲಿ ಕುಳಿತು ಉಗ್ರ ಚಟುವಟಿಕೆ ಕೆಲಸ ಮಾಡುತ್ತಾರೆ. ಇದಕ್ಕೆ ಸರ್ಕಾರ ಮತ್ತು ಗೃಹ ಇಲಾಖೆ ನೇರ ಕಾರಣ. ಇದನ್ನ ನಾನು ಖಂಡಿಸುತ್ತೇನೆ ಎಂದರು.