ತೆಲಂಗಾಣ: ಭಾವಿ, ನಿರ್ಗಮಿತ ಸಿಎಂ ನ್ನು ಸೋಲಿಸಿ ಭರ್ಜರಿ ಗೆಲುವು ಸಾಧಿಸಿದ ಬಿಜೆಪಿಯ ಕೆವಿಆರ್!

ತೆಲಂಗಾಣ: 4 ರಾಜ್ಯಗಳ ಚುನಾವಣಾ ಫಲಿತಾಂಶ ಪ್ರಕಟವಾಗಿದ್ದು, ಬಿಜೆಪಿ 3 ರಾಜ್ಯಗಳಲ್ಲಿ ಅತಿ ಹೆಚ್ಚು ಸ್ಥಾನದೊಂದಿಗೆ ಅಧಿಕಾರಕ್ಕೆ ಏರಿದೆ.

ತೆಲಂಗಾಣದಲ್ಲಿಯೂ ಬಿಜೆಪಿ ತನ್ನ ಸ್ಥಾನಗಳನ್ನು ಗಣನೀಯವಾಗಿ ಹೆಚ್ಚಿಸಿಕೊಂಡಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ 1 ಸ್ಥಾನದಲ್ಲಷ್ಟೇ ಗೆದ್ದಿದ್ದ ಬಿಜೆಪಿ ಈ ಬಾರಿ 8 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ.

ಈ ನಡುವೆ ತೆಲಂಗಾಣದಲ್ಲಿ ಪ್ರತಿಷ್ಠಿತ ಕಮ್ಮರೆಡ್ಡಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ಅಭ್ಯರ್ಥಿ ಕಟಿಪಲ್ಲಿ ವೆಂಕಟ ರಮಣ ರೆಡ್ಡಿ 10 ವರ್ಷಗಳ ಕಾಲ ಸಿಎಂ ಆಗಿದ್ದ ಕೆಸಿಆರ್ ಹಾಗೂ ಸಿಎಂ ಆಗಿ ಅಧಿಕಾರ ವಹಿಸಿಕೊಳ್ಳಲಿರುವ ಕಾಂಗ್ರೆಸ್ ನ ರೇವಂತ್ ರೆಡ್ಡಿ ಅವರನ್ನು ಸೋಲಿಸಿ ವಿಧಾನಸಭೆಗೆ ಪ್ರವೇಶಿಸಿದ್ದಾರೆ.

ರೇವಂತ್ ರೆಡ್ಡಿ ಹಾಗೂ ಕೆಸಿಆರ್ ಇಬ್ಬರೂ 2 ವಿಧಾನಸಭಾ ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದರು. ಈ ಪೈಕಿ ಕಮ್ಮಾರೆಡ್ಡಿ ಕ್ಷೇತ್ರವೂ ಒಂದಾಗಿತ್ತು.

Latest Indian news

Popular Stories