
Featured StoryUdupi
ಉಡುಪಿ: ನಾಳೆ ಸಂಜೆ ಉಡುಪಿಗೆ ಹೋಗಿ ಮಳೆ ಪರಿಸ್ಥಿತಿ ಪರಿಶೀಲನೆ – ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್
ಉಡುಪಿ: ಜಿಲ್ಲೆಯಲ್ಲಿ ಭಾರೀ ಮಳೆಯಿಂದಾಗಿ ಸಾಕಷ್ಟು ಅವಾಂತರ ಸೃಷ್ಟಿಯಾಗಿದ್ದು ಉಸ್ತುವಾರಿ ಸಚಿವೆ ಅಧಿವೇಶನ ಮುಗಿದ ಕೂಡಲೇ ನಾಳೆ ಉಡುಪಿಗೆ ಹೋಗಿ ಪರಿಶೀಲಿಸುವುದಾಗಿ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಇಬ್ಬರು ಮಳೆಯ ಕಾರಣಕ್ಕೆ ಮೃತಪಟ್ಟಿದ್ದಾರೆ. 24 ಗಂಟೆಯೊಳಗೆ ಪರಿಹಾರ ನೀಡಲು ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ಸಚಿವೆ ತಿಳಿಸಿದ್ದಾರೆ.
ಉಡುಪಿ ಜಿಲ್ಲಾಧಿಕಾರಿಯೊಂದಿಗೆ ನಿರಂತರ ಸಂಪರ್ಕದಲ್ಲಿದ್ದು ಪರಿಹಾರ ಕಾರ್ಯಕ್ಕೆ ಸೂಚನೆ ನೀಡಿದ್ದೇನೆ ಎಂದಿದ್ದಾರೆ.




