ಎಲ್‌ಕೆ ಅಡ್ವಾಣಿ ದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲು; ಆರೋಗ್ಯ ಸ್ಥಿರ, ವೈದ್ಯರ ನಿಗಾ

ನವದೆಹಲಿ: ಬಿಜೆಪಿ ಹಿರಿಯ ನಾಯಕ, ಮಾಜಿ ಉಪ ಪ್ರಧಾನಿ ಲಾಲ್ ಕೃಷ್ಣ ಅಡ್ವಾಣಿ ಅವರನ್ನು ದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಮತ್ತು ಅವರು ಪ್ರಸ್ತುತ ವೈದ್ಯರ ತಂಡದ ನಿಗಾದಲ್ಲಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ಗುರುವಾರ ತಿಳಿಸಿವೆ.

ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಯಿಂದ(ಎಐಐಎಂಎಸ್)ಯಿಂದ ಡಿಸ್ಚಾರ್ಜ್ ಆದ ಕೆಲವು ದಿನಗಳ ನಂತರ ಮತ್ತೆ 96 ವರ್ಷದ ಬಿಜೆಪಿ ನಾಯಕ ಬುಧವಾರ ರಾತ್ರಿ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದಾರೆ.

“ಎಲ್ ಕೆ ಅಡ್ವಾಣಿ ಅವರ ಆರೋಗ್ಯ ಸ್ಥಿರವಾಗಿದೆ. ಅವರು ಪ್ರಸ್ತುತ ನರವಿಜ್ಞಾನ ವಿಭಾಗದ ಹಿರಿಯ ಸಲಹೆಗಾರ ಡಾ ವಿನಿತ್ ಸೂರಿ ನೇತೃತ್ವದ ವೈದ್ಯರ ತಂಡದ ನಿಗಾದಲ್ಲಿದ್ದಾರೆ” ಎಂದು ಅಪೋಲೋ ಆಸ್ಪತ್ರೆಯ ಮೂಲಗಳು ತಿಳಿಸಿವೆ.

ಅಡ್ವಾಣಿ ಅವರ ಆರೋಗ್ಯ ಸ್ಥಿತಿಯ ಕುರಿತು ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ. ಅವರು ತಮ್ಮ ಪುತ್ರಿ ಪ್ರತಿಭಾ ಅಡ್ವಾಣಿ ಅವರೊಂದಿಗೆ ಆಸ್ಪತ್ರೆಗೆ ಬಂದಿದ್ದರು ಎಂದು ಅವರು ಹೇಳಿದ್ದಾರೆ.

Latest Indian news

Popular Stories