ಲೋಕಸಭಾ ಚುನಾವಣೆ: ಬಿಜೆಪಿ ಅಭ್ಯರ್ಥಿಗಳ 2ನೇ ಪಟ್ಟಿ ಇಂದು ಬಿಡುಗಡೆ

ಶಿವಮೊಗ್ಗ: ಮುಂಬರುವ ಲೋಕಸಭೆ ಚುನಾವಣೆಗೆ ಪಕ್ಷದ 2ನೇ ಎರಡನೇ ಅಭ್ಯರ್ಥಿಗಳ ಪಟ್ಟಿಯನ್ನು ಇಂದು ಬಿಡುಗಡೆಯಾಗಲಿದೆ ಎಂದು ಮಾಜಿ ಸಿಎಂ ಮತ್ತು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿಎಸ್ ಯಡಿಯೂರಪ್ಪ ಅವರು ಹೇಳಿದ್ದಾರೆ.

ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಇಂದು ಹೊಸದಿಲ್ಲಿಗೆ ಪ್ರಯಾಣ ಬೆಳೆಸಲಿದ್ದೇನೆ. ಸಂಜೆ ಚುನಾವಣಾ ಸಮಿತಿ ಸಭೆ ನಡೆಯಲಿದ್ದು, ಪ್ರಧಾನಿ ಮೋದಿ ಪಾಲ್ಗೊಳ್ಳಲಿದ್ದಾರೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಈಗಾಗಲೇ ಪೂರ್ವಭಾವಿ ಸಭೆ ನಡೆಸಲಾಗಿದೆ. ಎರಡನೇ ಪಟ್ಟಿಯ ಅಂತಿಮಗೊಳಿಸುವಿಕೆಯು ಇಂದು ಮುಕ್ತಾಯಗೊಳ್ಳುವ ನಿರೀಕ್ಷೆಯಿದೆ ಎಂದು ಹೇಳಿದರು.

ಜೆಡಿಎಸ್‌ಗೆ ಸೀಟು ಹಂಚಿಕೆ ವಿಚಾರವಾಗಿ ಮಾತನಾಡಿದ ಅವರು, ಜೆಡಿಎಸ್ ಜೊತೆ ಸೀಟು ಹಂಚಿಕೆ ವಿಚಾರ ಇನ್ನೂ ಚರ್ಚೆಯಲ್ಲಿದೆ. ಇಂದು ಅಂತಿಮ ನಿರ್ಧಾರಕ್ಕೆ ಬರಲಾಗುವುದು ಎಂದು ತಿಳಿಸಿದರು.

ಹಲವು ಹಾಲಿ ಸಂಸದರಿಗೆ ಟಿಕೆಟ್ ಸಿಗದಿರುವ ಸಾಧ್ಯತೆಯ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿ, ಈ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ ಎಂದರು.

ಶಿವಮೊಗ್ಗ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ನಟ ಶಿವರಾಜ್‌ಕುಮಾರ್‌ ಪತ್ನಿ ಹಾಗೂ ಮಾಜಿ ಸಿಎಂ ದಿವಂಗತ ಎಸ್‌ ಬಂಗಾರಪ್ಪ ಅವರ ಪುತ್ರಿ ಗೀತಾ ಶಿವರಾಜಕುಮಾರ್‌ ಕಣಕ್ಕಿಳಿದಿರುವ ಕುರಿತು ಪ್ರತಿಕ್ರಿಯಿಸಿ, ಸಂತೋಷ, ಅಭ್ಯರ್ಥಿ ಯಾರಾದರೂ ನಿಲ್ಲಲ್ಲೇಬೇಕಲ್ಲ ಎಂದು ಹೇಳಿದರು.

Latest Indian news

Popular Stories