ಆದಾಯಕ್ಕೂ ಮೀರಿ ಅಕ್ರಮ ಆಸ್ತಿ ಸಂಪಾದನೆ ದೂರು; ಲೋಕಾಯುಕ್ತ ದಾಳಿ
ಬೆಂಗಳೂರು: ರಾಜ್ಯದ ಹಲವೆಡೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ ನಡೆಸಿದ್ದಾರೆ. ಚಿತ್ರದುರ್ಗದ ಹೊಳಲ್ಕೆರೆ ಸಣ್ಣ ನೀರಾವರಿ ಇಲಾಖೆ ಇಂಜಿನಿಯರ್ ಕೆ.ಮಹೇಶ್, ಪತ್ನಿ BBMP ಎಇ ಹೆಚ್.ಭಾರತಿ ಮನೆ ಮೇಲೆ ಲೋಕಾಯುಕ್ತ ಎಸ್ಪಿ ವಾಸುದೇವರಾಮ್, ಡಿವೈಎಸ್ಪಿ ಮೃತ್ಯುಂಜಯ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ದಾವಣಗೆರೆಯ ಜಯನಗರದಲ್ಲಿರುವ ಮಹೇಶ್ ಮನೆ ಮೇಲೂ ದಾಳಿ ನಡೆಸಿ, ಪರಿಶೀಲಿಸುತ್ತಿದ್ದಾರೆ. ಆದಾಯಕ್ಕೂ ಮೀರಿ ಅಕ್ರಮ ಆಸ್ತಿ ಸಂಪಾದನೆ ದೂರು ಹಿನ್ನೆಲೆ ಲೋಕಾಯುಕ್ತ ದಾಳಿ ಮಾಡಲಾಗಿದೆ.
ಚಿತ್ರದುರ್ಗ, ದಾವಣಗೆರೆ, ಮಡಿಕೇರಿ, ಬೀದರ್ ಜಿಲ್ಲೆಗಳಲ್ಲಿ ದಾಳಿ ನಡೆಸಿದ್ದು, ಬೆಂಗಳೂರಿನ BBMP ಕಚೇರಿ ಮೇಲೂ ದಾಳಿ ನಡೆಯುವ ಸಾಧ್ಯತೆಯಿದೆ. ಇನ್ನು ಆದಾಯಕ್ಕೂ ಮೀರಿ ಅಕ್ರಮ ಆಸ್ತಿ ಸಂಪಾದನೆ ದೂರು ಹಿನ್ನೆಲೆ ಅಧಿಕಾರಿಗಳ ಮನೆಗಳ ಮೇಲೆ ಲೋಕಾಯುಕ್ತರ ದಾಳಿ ಮಾಡಿ ಪರಿಶೀಲನೆ ನಡೆಸಲಾಗುತ್ತಿದೆ.