ಲೋಕಸಭೆ ಚುನಾವಣೆ 2024: ಮೊದಲ ಹಂತದ 102 ಕ್ಷೇತ್ರಗಳಲ್ಲಿ ಬಹಿರಂಗ ಪ್ರಚಾರ ಮುಕ್ತಾಯ

ನವದೆಹಲಿ: ಏಪ್ರಿಲ್ 19 ರಂದು ಮೊದಲ ಹಂತದಲ್ಲಿ ಲೋಕಸಭೆ ಚುನಾವಣೆ ನಡೆಯಲಿರುವ 21 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಹಂಚಿಕೆಯಾಗಿರುವ 102 ಕ್ಷೇತ್ರಗಳಲ್ಲಿ ಬಹಿರಂಗ ಪ್ರಚಾರ ಬುಧವಾರ ಮುಕ್ತಾಯವಾಯಿತು.

ಮೊದಲ ಹಂತದಲ್ಲಿ, ಅರುಣಾಚಲ ಪ್ರದೇಶ (2 ಸ್ಥಾನಗಳು), ಅಸ್ಸಾಂ (5), ಬಿಹಾರ (4), ಛತ್ತೀಸ್‌ಗಢ (1), ಮಧ್ಯಪ್ರದೇಶ (6), ಮಹಾರಾಷ್ಟ್ರ (5), ಮಣಿಪುರ (2), ಮೇಘಾಲಯ ( 2), ಮಿಜೋರಾಂ (1), ನಾಗಾಲ್ಯಾಂಡ್ (1), ರಾಜಸ್ಥಾನ (12), ಸಿಕ್ಕಿಂ (1), ತಮಿಳುನಾಡು (39), ತ್ರಿಪುರಾ (1), ಉತ್ತರ ಪ್ರದೇಶ (8), ಉತ್ತರಾಖಂಡ (5), ಪಶ್ಚಿಮ ಬಂಗಾಳ (3) , ಅಂಡಮಾನ್ ಮತ್ತು ನಿಕೋಬಾರ್ (1), ಜಮ್ಮು ಮತ್ತು ಕಾಶ್ಮೀರ (1), ಲಕ್ಷದ್ವೀಪ (1) ಮತ್ತು ಪುದುಚೇರಿ (1) ಮತ್ತು ಉತ್ತರ ಪ್ರದೇಶದ 8 ಕ್ಷೇತ್ರಗಳಲ್ಲಿ ಏಪ್ರಿಲ್ 19 ರಂದು ಮೊದಲ ಹಂತದ ಮತದಾನದ ಪ್ರಚಾರವು ಬುಧವಾರ ಸಂಜೆ ಮುಕ್ತಾಯಗೊಂಡಿತು. ಅಭ್ಯರ್ಥಿಗಳು ತಮ್ಮ ಪ್ರಚಾರವನ್ನು ಅಂತ್ಯಗೊಳಿಸಿದರು.

ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಮತ್ತು ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಮತ್ತಿತರರು ಪ್ರಚಾರದ ಅಂತಿಮ ದಿನದಂದು ಸಹರಾನ್‌ಪುರ ಮತ್ತು ಮೊರಾದಾಬಾದ್‌ನಲ್ಲಿ ರ್ಯಾಲಿ ನಡೆಸಿದರು.

ಶುಕ್ರವಾರದ ಮೊದಲ ಹಂತದಲ್ಲಿ ಸಹರಾನ್‌ಪುರ, ಬಿಜ್ನೋರ್, ಕೈರಾನಾ, ಮುಜಾಫರ್‌ನಗರ, ನಗೀನಾ, ಮೊರಾದಾಬಾದ್, ರಾಂಪುರ ಮತ್ತು ಪಿಲಿಭಿತ್ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ.ಅಂತೆಯೇ ಬುಧವಾರ ಸಂಜೆ 5 ಗಂಟೆಗೆ ಉತ್ತರಾಖಂಡದಲ್ಲಿ ಪ್ರಚಾರವನ್ನು ಮುಕ್ತಾಯಗೊಳಿಸಲಾಯಿತು ಎಂದು ಮುಖ್ಯ ಚುನಾವಣಾ ಅಧಿಕಾರಿ ಬಿ ವಿಆರ್‌ಸಿ ಪುರುಷೋತ್ತಮ್ ತಿಳಿಸಿದ್ದಾರೆ.

ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ ಅವರು ಚುನಾವಣಾ ಪ್ರಚಾರದ ಕೊನೆಯ ದಿನವಾದ ಬುಧವಾರ ಹಲ್ದ್ವಾನಿಯಲ್ಲಿ ರೋಡ್ ಶೋನಲ್ಲಿ ಭಾಗವಹಿಸಿದ್ದರು.

ಗಾಜಿಯಾಬಾದ್ ನಲ್ಲಿ ಬುಧವಾರ ಇಂಡಿಯಾ ಮೈತ್ರಿಕೂಟದ ಅಂಗಪಕ್ಷ ಎಸ್ ಪಿ ಮುಖ್ಯಸ್ಥ ಅಖಿಲೇಶ್ ಯಾದವ್ ಅವರೊಂದಿಗೆ ಜಂಟಿ ಸುದ್ದಿಗೋಷ್ಠಿಯಲ್ಲಿ ರಾಹುಲ್ ಗಾಂಧಿ ಮಾತನಾಡಿದರು. ಪಶ್ಚಿಮ ಯುಪಿಯಿಂದ ಬಿಜೆಪಿ ನಿರ್ನಾಮವಾಗಲಿದೆ ಎಂದು ಯಾದವ್ ಭವಿಷ್ಯ ನುಡಿದರು. ಇದೇ ಸಂದರ್ಭದಲ್ಲಿ ಉತ್ತರ ಪ್ರದೇಶದ ಇಂಡಿಯಾ ಬ್ಲಾಕ್‌ನ ಹಾಡನ್ನು ಸಹ ಬಿಡುಗಡೆ ಮಾಡಲಾಯಿತು.

18 ನೇ ಲೋಕಸಭೆಯ 543 ಸದಸ್ಯರನ್ನು ಆಯ್ಕೆ ಮಾಡಲು ಭಾರತದಲ್ಲಿ ಏಪ್ರಿಲ್ 19 ರಿಂದ ಜೂನ್ 1 ರವರೆಗೆ ಏಳು ಹಂತಗಳಲ್ಲಿ ಲೋಕಸಭಾ ಚುನಾವಣೆ ನಡೆಯಲಿದೆ. ಜೂನ್ 4 ರಂದು ಫಲಿತಾಂಶ ಪ್ರಕಟವಾಗಲಿದೆ.

Latest Indian news

Popular Stories