ನಿತೀಶ್ ಕುಮಾರ್, ಚಂದ್ರಬಾಬು ನಾಯ್ದು ಸಂಪರ್ಕಿಸಿದ INDIA ಒಕ್ಕೂಟ – ಅಮಿತ್ ಶಾ ಕರೆ ಸ್ವೀಕರಿಸುತ್ತಿಲ್ಲ ಚಂದ್ರಬಾಬು ನಾಯ್ಡು!


ಈ ನಿಟ್ಟಿನಲ್ಲಿ ಇದೀಗ INDIA ಒಕ್ಕೂಟದ ನಾಯಕರು ಇದೀಗ ಬಿಹಾರ ಸಿಎಂ ನಿತೀಶ್ ಕುಮಾರ್ ಮತ್ತು ತೆಲುಗು ದೇಶಂ ಪಕ್ಷದ ಮುಖ್ಯಸ್ಥ ಚಂದ್ರಬಾಬು ನಾಯ್ದು ಅವರನ್ನು ಸಂಪರ್ಕಿಸಿ ಒಕ್ಕೂಟಕ್ಕೆ ಸೆಳೆಯಲು ಯತ್ನ ನಡೆಸಿವೆ. ಈ ನಡುವೆ ಮೂಲಗಳಿಂದ ಚಂದ್ರಬಾಬು ನಾಯ್ಡು ಅಮಿತ್ ಶಾ ಕರೆ ಸ್ವೀಕರಿಸುತ್ತಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.

ಬಿಹಾರದ 40 ಸ್ಥಾನಗಳ ಪೈಕಿ ಜೆಡಿಯು 15ರಲ್ಲಿ ಮುನ್ನಡೆ ಸಾಧಿಸಿದ್ದರೆ, ಆಂಧ್ರಪ್ರದೇಶದ 25 ಲೋಕಸಭಾ ಸ್ಥಾನಗಳಲ್ಲಿ 16ರಲ್ಲಿ ಟಿಡಿಪಿ ಮುನ್ನಡೆ ಸಾಧಿಸಿದೆ.

ಎರಡೂ ಪಕ್ಷಗಳು ಪ್ರಸ್ತುತ NDAಯಲ್ಲಿವೆ. ಹೀಗಾಗಿ ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದರೆ ಈ ಇಬ್ಬರು ನಾಯಕರ ಕೃಪೆಯಿಂದ ನಡೆಯಬೇಕಿದ್ದು, ನಿತೀಶ್‌ ಮತ್ತು ನಾಯ್ಡು ಕಿಂಗ್‌ಮೇಕರ್‌ ಆಗಲಿದ್ದಾರೆ. ಏಕೆಂದರೆ ಅವರಿಬ್ಬರೂ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಯಾವಾಗ ಬೇಕಾದರೂ ಮೈತ್ರಿ ಬದಲಾಯಿಸುವ ಇತಿಹಾಸವನ್ನು ಉಭಯ ನಾಯಕರೂ ಹೊಂದಿದ್ದಾರೆ.

ಚಂದ್ರಬಾಬು ನಾಯ್ಡು ಅವರು 2014 ಮತ್ತು 2019ರ ನಡುವೆ ಎನ್‌ಡಿಎ ಸರ್ಕಾರದ ಭಾಗವಾಗಿದ್ದರು. 2019ರ ಲೋಕಸಭೆ ಚುನಾವಣೆಗೆ ಮೊದಲು ಎನ್‌ಡಿಎ ತೊರೆದರು. ಕಾಂಗ್ರೆಸ್ ನೇತೃತ್ವದ ಯುಪಿಎ ಮೈತ್ರಿಕೂಟಕ್ಕೆ ಸೇರಿದರು. ರಾಷ್ಟ್ರೀಯ ಚುನಾವಣೆಗಳು ಘೋಷಣೆಯಾಗುವ ಕೆಲವೇ ದಿನಗಳ ಮೊದಲು, ಮಾರ್ಚ್ 2024ರಲ್ಲಿ ಮತ್ತೆ NDAಯ ಭಾಗವಾದರು.

2019ರ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ ಏಕಾಂಗಿಯಾಗಿ 303 ಸ್ಥಾನಗಳನ್ನು ಗೆದ್ದಿದ್ದರೆ, ಎನ್‌ಡಿಎ 353 ಸ್ಥಾನಗಳನ್ನು ಪಡೆದಿತ್ತು.

Latest Indian news

Popular Stories