ಲೋಕಸಭಾ ಚುನಾವಣೆ 2024: ಕಾಂಗ್ರೆಸ್ ಅಭ್ಯರ್ಥಿಗಳ 4 ನೇ ಪಟ್ಟಿ ಬಿಡುಗಡೆ ಪ್ರಧಾನಿ ವಿರುದ್ಧದ ಅಭ್ಯರ್ಥಿ ಯಾರು ಗೊತ್ತೇ? | ಶಶಿಕಾಂತ್ ಸೆಂಥಿಲ್ ಅವರಿಗೆ ತಿರುವಳ್ಳೂರಿನಿಂದ ಸ್ಪರ್ಧಿಸಲು ಟಿಕೆಟ್

ನವದೆಹಲಿ: ಲೋಕಸಭಾ ಚುನಾವಣೆ 2024 ಕ್ಕೆ ಕಾಂಗ್ರೆಸ್ ನ ಅಭ್ಯರ್ಥಿಗಳ 4 ನೇ ಪಟ್ಟಿ ಬಿಡುಗಡೆಯಾಗಿದೆ. 46 ಲೋಕಸಭಾ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಲಾಗಿದೆ. ಪಕ್ಷದ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ಹಾಗೂ ಅಜಯ್ ರೈ ಹಾಗೂ ಕಾರ್ತಿ ಚಿದಂಬರಂ ಅವರನ್ನು ಕಣಕ್ಕೆ ಇಳಿಸಲಾಗಿದೆ.

ರಾಜ್ ಘರ್ ಕ್ಷೇತ್ರದಿಂದ ಮಧ್ಯಪ್ರದೇಶದ ಮಾಜಿ ಸಿಎಂ ದಿಗ್ವಿಜಯ್ ಸಿಂಗ್ ಅವರನ್ನು ಕಣಕ್ಕೆ ಇಳಿಸಲಾಗಿದ್ದರೆ, ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾರಣಾಸಿಯಿಂದ ಅಜಯ್ ರೈ ಸ್ಪರ್ಧಿಸಲಿದ್ದಾರೆ.

ಬಿಎಸ್ ಪಿಯ ಉಚ್ಛಾಟಿತ ನಾಯಕ ಡ್ಯಾನಿಶ್ ಅಲಿ ಅವರನ್ನು ಉತ್ತರ ಪ್ರದೇಶದ ಅಮ್ರೋಹಾ ಕ್ಷೇತ್ರದಿಂದ ಕಣಕ್ಕೆ ಇಳಿಸಲಾಗಿದೆ. ಉತ್ತರ ಪ್ರದೇಶದ ಶಾಸಕ ಇಮ್ರಾನ್ ಮಸೂದ್ ಅವರನ್ನು ಸಹರನ್ ಪುರ ಕ್ಷೇತ್ರ ಹಾಗೂ ಕಾನ್ಪುರದಿಂದ ಅಲೋಕ್ ಮಿಶ್ರಾ ಅವರಿಗೆ ಟಿಕೆಟ್ ನೀಡಲಾಗಿದೆ.

ಬಿಎಸ್ ಪಿಯ ಉಚ್ಛಾಟಿತ ನಾಯಕ ಡ್ಯಾನಿಶ್ ಅಲಿ ಅವರನ್ನು ಉತ್ತರ ಪ್ರದೇಶದ ಅಮ್ರೋಹಾ ಕ್ಷೇತ್ರದಿಂದ ಕಣಕ್ಕೆ ಇಳಿಸಲಾಗಿದೆ. ಉತ್ತರ ಪ್ರದೇಶದ ಶಾಸಕ ಇಮ್ರಾನ್ ಮಸೂದ್ ಅವರನ್ನು ಸಹರನ್ ಪುರ ಕ್ಷೇತ್ರ ಹಾಗೂ ಕಾನ್ಪುರದಿಂದ ಅಲೋಕ್ ಮಿಶ್ರಾ ಅವರಿಗೆ ಟಿಕೆಟ್ ನೀಡಲಾಗಿದೆ.

ಉತ್ತರಾಖಂಡದ ಮಾಜಿ ಮುಖ್ಯಮಂತ್ರಿ ಹರೀಶ್ ರಾವತ್ ಅವರ ಪುತ್ರ ವೀರೇಂದ್ರ ರಾವತ್ ಅವರಿಗೆ ಹರಿದ್ವಾರ ಲೋಕಸಭಾ ಕ್ಷೇತ್ರದಿಂದ ಟಿಕೆಟ್ ನೀಡಲಾಗಿದ್ದು, ಕಾಂಗ್ರೆಸ್ ಮುಖಂಡ ಪಿಎಲ್ ಪುನಿಯಾ ಅವರ ಪುತ್ರ ತನುಜ್ ಪುನಿಯಾ ಅವರಿಗೆ ಉತ್ತರ ಪ್ರದೇಶದ ಬಾರಾ ಬಂಕಿಯಿಂದ ಲೋಕಸಭೆ ಟಿಕೆಟ್ ನೀಡಲಾಗಿದೆ.

ಕಾಂಗ್ರೆಸ್ ನಾಯಕ ಮತ್ತು ಮಾಜಿ ಕೇಂದ್ರ ಸಚಿವ ಪಿ ಚಿದಂಬರಂ ಅವರ ಪುತ್ರ ಕಾರ್ತಿ ಚಿದಂಬರಂ ಅವರನ್ನು ತಮಿಳುನಾಡಿನ ಶಿವಗಂಗಾ ಕ್ಷೇತ್ರದ ಅಭ್ಯರ್ಥಿಯನ್ನಾಗಿ ಘೋಷಿಸಲಾಗಿದೆ. ರಾಜೀನಾಮೆ ನೀಡಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದ ಐಎಎಸ್ ಅಧಿಕಾರಿ ಶಶಿಕಾಂತ್ ಸೆಂಥಿಲ್ ಅವರಿಗೆ ತಿರುವಳ್ಳೂರಿನಿಂದ ಸ್ಪರ್ಧಿಸಲು ಟಿಕೆಟ್ ನೀಡಲಾಗಿದೆ.

ತಮಿಳುನಾಡಿನ ಹಾಲಿ ಸಂಸದ ಮಾಣಿಕ್ಕಂ ಠಾಗೋರ್ ಅವರು ವಿರುದ್ಧನಗರದಿಂದ ಮತ್ತೊಮ್ಮೆ ಸ್ಪರ್ಧಿಸಲಿದ್ದಾರೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಎರಡು ಬಾರಿ ಸಂಸದರಾಗಿರುವ ಚೌಧರಿ ಲಾಲ್ ಸಿಂಗ್ ಅವರನ್ನು ಉಧಂಪುರ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಕಣಕ್ಕಿಳಿಸಿದೆ. ಅವರು ಕೇಂದ್ರ ಸಚಿವ ಜಿತೇಂದ್ರ ಸಿಂಗ್ ವಿರುದ್ಧ ಕಣಕ್ಕಿಳಿದಿದ್ದಾರೆ. ಜಮ್ಮು ಕ್ಷೇತ್ರದಿಂದ ಜೆ & ಕೆ ಕಾಂಗ್ರೆಸ್‌ನ ಕಾರ್ಯಾಧ್ಯಕ್ಷ ಮತ್ತು ಮಾಜಿ ರಾಜ್ಯ ಸಚಿವ ರಾಮನ್ ಭಲ್ಲಾ ಅವರಿಗೆ ಪಕ್ಷವು ಟಿಕೆಟ್ ನೀಡಿದೆ.

ಪಕ್ಷವು ರಾಜಸ್ಥಾನದ ನಾಗೌರ್ ಲೋಕಸಭಾ ಕ್ಷೇತ್ರವನ್ನು ಹನುಮಾನ್ ಬೇನಿವಾಲ್ ಅವರ ರಾಷ್ಟ್ರೀಯ ಲೋಕತಾಂತ್ರಿಕ ಪಕ್ಷಕ್ಕೆ ಬಿಟ್ಟುಕೊಟ್ಟಿದೆ. ಹನುಮಾನ್ ಬೇನಿವಾಲ್ ಅವರು ಭಾರತೀಯ ಬ್ಲಾಕ್ ಅಡಿಯಲ್ಲಿ ಆರ್‌ಎಲ್‌ಪಿ ಟಿಕೆಟ್‌ನಲ್ಲಿ ನಾಗೌರ್‌ನಿಂದ ಬಿಜೆಪಿಯ ಜ್ಯೋತಿ ಮಿರ್ಧಾ ವಿರುದ್ಧ ಸ್ಪರ್ಧಿಸಲಿದ್ದಾರೆ.

Latest Indian news

Popular Stories