ಲೋಕಸಭಾ ಚುನಾವಣೆ ಎಪ್ರಿಲ್ 19 ರಿಂದ ಆರಂಭ, 7 ಹಂತದಲ್ಲಿ ಮತದಾನ – ಚುನಾವಣಾ ಆಯೋಗದಿಂದ ದಿನಾಂಕ ಘೋಷಣೆ

ಲೋಕಸಭಾ ಚುನಾವಣೆಯ ದಿನಾಂಕ ಚುನಾವಣಾ ಘೋಷಣೆ ಮಾಡಿದ್ದು ಈ ಮಹಾ ಚುನಾವಣೆ ಏಳು ಹಂತದಲ್ಲಿ ನಡೆಯಲಿದೆ. ಮೊದಲ ಹಂತ ಎಪ್ರಿಲ್ 19 ರಂದು ನಡೆಯಲಿದೆ. 2 ನೇ ಹಂತದ ಮತದಾನ 26 ಎಪ್ರಿಲ್, ಮೂರನೇ ಹಂತ ಮೇ 7, 4 ನೇ ಹಂತ ಮೇ 13, 5 ನೇ ಹಂತ ಮೇ 20, 6 ನೇ ಹಂತ 25 ಮೇ ಮತ್ತು ಏಳನೇ ಹಂತ ಜೂನ್ 1 ರಂದು ನಡೆಯಲಿದೆ.

ಕರ್ನಾಟಕದಲ್ಲಿ ಎಪ್ರಿಲ್ 26 ಮತ್ತು ಮೇ 7 ರಂದು ಎರಡು ಹಂತದಲ್ಲಿ ಚುನಾವಣೆ ನಡೆಯಲಿದೆ.

ಚುನಾವಣಾ ಫಲಿತಾಂಶ ಜೂನ್ ನಾಲ್ಕರಂದು ನಡೆಯಲಿದೆ.

2024 ರ ಲೋಕಸಭೆ ಚುನಾವಣೆ ಜೊತೆಗೆ ಆಂಧ್ರ ಪ್ರದೇಶ, ಸಿಕ್ಕಿಂ, ಅರುಣಾಚಲ ಪ್ರದೇಶ ಹಾಗೂ ಒಡಿಶಾ ರಾಜ್ಯಗಳ ವಿಧಾನಸಭಾ ಚುನಾವಣೊ ಕೇಂದ್ರ ಚುನಾವಣಾ ಆಯೋಗ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಅಲ್ಲದೆ ರಾಜ್ಯದ ಸುರಪುರ ವಿಧಾನಸಭಾ ಕ್ಷೇತ್ರಕ್ಕೂ ಉಪ ಚುನಾವಣೆ ಘೋಷಿಸಲಾಗಿದೆ.

ಚುನಾವಣೆಯಲ್ಲಿ ಹಿಂಸೆಗೆ ಅವಕಾಶ ನೀಡಲ್ಲ: ರಾಜೀವ್ ಕುಮಾರ್​

ಚುನಾವಣೆಯಲ್ಲಿ ಹಿಂಸೆಗೆ ಅವಕಾಶ ನೀಡಲ್ಲ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹೇಳಿದರು. ಎಲ್ಲಾ ಕಡೆ ಚೆಕ್​ಪೋಸ್ಟ್ ಇರಲಿವೆ, ಡ್ರೋನ್​ ಮೂಲಕ ಕಣ್ಗಾವಲು ಇರಿಸಲಾಗುವುದು. 24 ಗಂಟೆಗಳ ಕಂಟ್ರೋಲ್ ರೂಂಗಳು ಕರ್ತವ್ಯ ನಿರ್ವಹಿಸಲಿವೆ. ಸಿಆರ್​ಪಿಎಫ್ ತುಕಡಿಗಳನ್ನು ನಿಯೋಜನೆ ಮಾಡಲಾಗುವುದು. ರೌಡಿಶೀಟರ್​ಗಳ ಮೇಲೂ ತೀವ್ರ ನಿಗಾ ಇಡಲಾಗುವುದು. ಅಂತರಾಷ್ಟ್ರೀಯ ಗಡಿಯಲ್ಲೂ ಡ್ರೋಣ್ ಮೂಲಕ ಕಣ್ಗಾವಲು ಇರಿಸಲಾಗುವುದು ಎಂದರು.

ಅಕ್ರಮದ ಬಗ್ಗೆ ಆ್ಯಪ್ ಮೂಲಕ ಮಾಹಿತಿ ನೀಡಿ: ರಾಜೀವ್ ಕುಮಾರ್

ಆ್ಯಪ್ ಮೂಲಕ ತಮ್ಮ ಅಭ್ಯರ್ಥಿಗಳ ಮಾಹಿತಿ ಲಭ್ಯ ಇರಲಿದೆ. ಅಭ್ಯರ್ಥಿಗಳ ಅಪರಾಧ ಪ್ರಕರಣಗಳ ಕುರಿತು ಮಾಹಿತಿ ಆ್ಯಪ್​ನಲ್ಲಿರಲಿದೆ. ಚುನಾವಣಾ ಅಕ್ರಮಗಳನ್ನು ಮತದಾರ ಬಯಲು ಮಾಡಬಹುದು. ಆ್ಯಪ್ ಮೂಲಕ ಅಕ್ರಮದ ಫೋಟೋ, ವಿಡಿಯೋ ಅಪ್ಲೋಡ್ ಮಾಡಬಹುದು. ಕೂಡಲೇ ಅಕ್ರಮ ಎಸಗುವ ಅಭ್ಯರ್ಥಿಗಳ ವಿರುದ್ದ ಕ್ರಮ ಕೈಗೊಳ್ಳಲಾಗುವುದು ಎಂದು ರಾಜೀವ್ ಕುಮಾರ್ ಹೇಳಿದರು.

ದಿವ್ಯಾಂಗರಿಗೆ ಮನೆಯಿಂದಲೇ ಮತದಾನಕ್ಕೆ ಅವಕಾಶ: ರಾಜೀವ್ ಕುಮಾರ್

ಮತದಾನ ಕೇಂದ್ರಗಳಲ್ಲಿ ನೀರು, ಶೌಚಾಲಯ, ಹೆಲ್ಪ್​ಡೆಸ್ಕ್​, ವಿದ್ಯುತ್​ ಸೇರಿ ಮೂಲಕ ಸೌಕರ್ಯಗಳ ವ್ಯವಸ್ಥೆ ಮಾಡಲಾಗುತ್ತದೆ. 85 ವರ್ಷ ಮೇಲ್ಪಟ್ಟವರಿಗೆ ಮನೆಯಿಂದಲೇ ಮತದಾನಕ್ಕೆ ವ್ಯವಸ್ಥೆ ಮಾಡಲಾಗುವುದು. 40%ಕ್ಕೂ ಹೆಚ್ಚು ದಿವ್ಯಾಂಗರಿಗೆ ಮನೆಯಿಂದಲೇ ಮತದಾನಕ್ಕೆ ಅವಕಾಶ ಕಲ್ಪಿಸಲಾಗುವುದು. ಮತದಾನ ಕೇಂದ್ರಗಳಲ್ಲಿ ವ್ಹೀಲ್​ಚೇರ್ ವ್ಯವಸ್ಥೆ ಇರಲಿದ್ದು​, ಸ್ವಯಂಸೇವಕರೂ ಇರಲಿದ್ದಾರೆ.

12 ರಾಜ್ಯಗಳಲ್ಲಿ ಮಹಿಳಾ ಮತದಾರರು ಹೆಚ್ಚು: ರಾಜೀವ್ ಕುಮಾರ್

12 ರಾಜ್ಯಗಳಲ್ಲಿ ಪುರುಷ ಮತದಾರಗಿಂತ ಮಹಿಳಾ ಮತದಾರರ ಸಂಖ್ಯೆ ಹೆಚ್ಚಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹೇಳಿದರು. ರಾಷ್ಟ್ರಕ್ಕೆ ನಿಜವಾದ ಹಬ್ಬದ, ಪ್ರಜಾಸತ್ತಾತ್ಮಕ ವಾತಾವರಣವನ್ನು ನೀಡಲು ನಾವು ಬದ್ಧರಾಗಿದ್ದೇವೆ. 17 ನೇ ಲೋಕಸಭೆಯ ಅವಧಿಯು 16 ಜೂನ್ 2024 ರಂದು ಮುಕ್ತಾಯಗೊಳ್ಳಲಿದೆ. ಆಂಧ್ರಪ್ರದೇಶ, ಒಡಿಶಾದ ಶಾಸನ ಸಭೆಗಳ ಅವಧಿ, ಅರುಣಾಚಲ ಪ್ರದೇಶ ಮತ್ತು ಸಿಕ್ಕಿಂ ಕೂಡ ಜೂನ್ 2024 ರಲ್ಲಿ ಮುಕ್ತಾಯಗೊಳ್ಳಲಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಚುನಾವಣೆಗಳು ನಡೆಯಲಿವೆ ಎಂದರು.

ಮೊದಲ ಬಾರಿ ಮತಚಲಾವಣೆ ಮಾಡಲಿದ್ದಾರೆ 1.8 ಕೋಟಿ ಮತದಾರರು

ದೇಶದಲ್ಲಿ 1.8 ಕೋಟಿ ಮತದಾರರು ಮೊದಲ ಬಾರಿಗೆ ಮತಚಲಾವಣೆ ಮಾಡಲಿದ್ದಾರೆ ಎಂದು ಹೇಳಿದ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್, 49.7 ಕೋಟಿ ಪುರುಷರು, 47.1 ಕೋಟಿ ಮಹಿಳಾ ಮತದಾರರಿದ್ದಾರೆ. 48 ಸಾವಿರ ತೃತೀಯ ಲಿಂಗಿ ಮತದಾರರು ಮತಚಲಾಯಿಸಲಿದ್ದಾರೆ. 85 ವರ್ಷ ಮೇಲ್ಪಟ್ಟ 82 ಲಕ್ಷ ಮತದಾರರು ಮತಚಲಾಯಿಸಲಿದ್ದಾರೆ. 19.74 ಕೋಟಿ ಯುವ ಮತದಾರರು ಮತ ಚಲಾಯಿಸಲಿದ್ದಾರೆ ಎಂದರು.

ಸುಳ್ಳು ಸುದ್ದಿಗಳ ಮೇಲೆ ನಿಗಾ: ರಾಜೀವ್ ಕುಮಾರ್

ಸಾಮಾಜಿಕ ಜಾಲತಾಣದಲ್ಲಿ ಫೇಕ್ ಸುದ್ದಿಗಳ ಮೇಲೂ ನಿಗಾ ಇಡಲಾಗುವುದು ಎಂದು ರಾಜೀವ್ ಕುಮಾರ್ ಹೇಳಿದರು. ಅಭ್ಯರ್ಥಿಗಳನ್ನು ಬಗ್ಗೆ ಮಾತನಾಡಲು ಅವಕಾಶವಿದೆ. ಆದರೆ ಸುಳ್ಳು ಸುದ್ದಿಗಳ ಮೂಲಕ ತೆಗಳಲು ಅವಕಾಶವಿಲ್ಲ ಎಂದರು.

ಮುಖ್ಯಾಂಶಗಳು:
*ದೇಶಾದ್ಯಂತ ಈವರೆಗೆ 400 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಸಲಾಗಿದೆ.
*ದೇಶಾದ್ಯಂತ 10.5 ಲಕ್ಷ ಮತಗಟ್ಟೆಗಳ ಸ್ಥಾಪನೆ
*ದೇಶದಲ್ಲಿ ಒಟ್ಟು 97 ಕೋಟಿ ಮತದಾರರಿದ್ದಾರೆ.
*ಈ ಬಾರಿ 1.82 ಕೋಟಿ ಜನರು ಮೊದಲ ಬಾರಿ ಮತ ಚಲಾಯಿಸಲಿದ್ದಾರೆ.
*1.5 ಕೋಟಿ ಭದ್ರತಾ ಸಿಬಂದಿ, ಅಧಿಕಾರಿಗಳ ನೇಮಕ
*ಮತದಾನಕ್ಕೆ ಒಟ್ಟು 55 ಲಕ್ಷ ಇವಿಎಂಗಳ ಬಳಕೆ
*49.7 ಕೋಟಿ ಪುರುಷ ಮತದಾರರಿದ್ದಾರೆ
*47.1 ಕೋಟಿ ಮಹಿಳಾ ಮತದಾರರಿದ್ದಾರೆ.
*85 ವರ್ಷ ಮೇಲ್ಪಟ್ಟ 82 ಲಕ್ಷ ಮತದಾರರು ಮತ ಚಲಾಯಿಸಲಿದ್ದಾರೆ.
*20ರಿಂದ 29 ವರ್ಷದೊಳಗಿನ 19.74 ಕೋಟಿ ಯುವ ಮತದಾರರು ಮತ ಚಲಾಯಿಸಲಿದ್ದಾರೆ.
*12 ರಾಜ್ಯಗಳಲ್ಲಿ ಮಹಿಳಾ ಮತದಾರರ ಸಂಖ್ಯೆ ಹೆಚ್ಚು
*48 ಸಾವಿರ ತೃತೀಯ ಲಿಂಗಿ ಮತದಾರರು ಮತ ಚಲಾಯಿಸಲಿದ್ದಾರೆ.
*ಮತಗಟ್ಟೆಗಳಲ್ಲಿ ಹೆಲ್ಫ್‌ ಡೆಸ್ಕ್‌, ವ್ಹೀಲ್‌ ಚೇರ್‌ ವ್ಯವಸ್ಥೆ.
*ಈ ಬಾರಿ 2.18 ಲಕ್ಷ ಶತಾಯುಷಿ ಮತದಾರರು ಮತ ಚಲಾಯಿಸಲಿದ್ದಾರೆ.
*ಬಾರ್ಡರ್‌ ಗಳಲ್ಲಿ ಡ್ರೋನ್‌ ಮೂಲಕ ಕಣ್ಗಾವಲು
*ಪ್ರತಿ ಜಿಲ್ಲೆಯಲ್ಲಿ ಕಂಟ್ರೋಲ್‌ ರೂಂ
*ಅಕ್ರಮವಾಗಿ ಹಣ ಸಾಗಿಸಿದರೆ ಕಠಿನ ಕ್ರಮ
*ಕುಕ್ಕರ್‌, ಮದ್ಯ, ಹಣ ಹಂಚುವುದಿಲ್ಲ
*ಚುನಾವಣಾ ಪ್ರಚಾರದ ವೇಳೆ ಹಲವಾರುಚ
*ವೈಯಕ್ತಿಕವಾಗಿ ಟೀಕೆ ಮಾಡುಂತಿಲ್ಲಾ
*ಮಕ್ಕಳನ್ನು ಚುನಾವಣಾ ಪ್ರಕಾಕ್ಕೆ
* ಅಭ್ಯರ್ಥಿಗಳು ಮತದಾರರನ್ನು ಪ್ರಚೋದಿಸುವಂತಿಲ್ಲ.
ದೇಶದ 26 ರಾಜ್ಯಗಳಲ್ಲಿ ವಿಧಾನಸಭೆಯ ಉಪ ಚುನಾವಣೆ ನಡೆಯಲಿದೆ.

Latest Indian news

Popular Stories