ವಾಣಿಜ್ಯ LPG ಸಿಲಿಂಡರ್ ಬೆಲೆ 209 ರೂ. ಹೆಚ್ಚಳ

ಹೊಸದಿಲ್ಲಿ: ವಾಣಿಜ್ಯ ಎಲ್ ಪಿಜಿ ಸಿಲಿಂಡರ್ ಗಳು ಮತ್ತೆ ತುಟ್ಟಿಯಾಗಿದೆ. ಸಾರ್ವಜನಿಕ ವಲಯದ ತೈಲ ಮಾರುಕಟ್ಟೆ ಕಂಪನಿಗಳು (OMCs) ಭಾನುವಾರ ವಾಣಿಜ್ಯ ಎಲ್ ಪಿಜಿ ಸಿಲಿಂಡರ್‌ ಗಳ ಬೆಲೆಯನ್ನು 209 ರೂ.ಗಳಷ್ಟು ಹೆಚ್ಚಿಸಿವೆ. ಇವು ತಕ್ಷಣದಿಂದಲೇ ಜಾರಿಗೆ ಬರುತ್ತವೆ.

ತೈಲ ಕಂಪನಿಗಳು 19 ಕೆಜಿ ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ ಗಳ ಬೆಲೆಯನ್ನು 158 ರೂ ಕಡಿತಗೊಳಿಸಿದ ಸುಮಾರು ಒಂದು ತಿಂಗಳ ನಂತರ ಬೆಲೆಯಲ್ಲಿ ಈ ಹೆಚ್ಚಳವಾಗಿದೆ.

ಗಮನಾರ್ಹವಾಗಿ, ವಾಣಿಜ್ಯ ಮತ್ತು ಗೃಹಬಳಕೆಯ ಎಲ್ ಪಿಜಿ (ದ್ರವೀಕೃತ ಪೆಟ್ರೋಲಿಯಂ ಅನಿಲ) ಸಿಲಿಂಡರ್‌ ಗಳ ಬೆಲೆಯು ಪ್ರತಿ ತಿಂಗಳ ಮೊದಲ ದಿನದಂದು ಮಾಸಿಕ ಪರಿಷ್ಕರಣೆಗಳಿಗೆ ಒಳಗಾಗುತ್ತದೆ. ಹೀಗಾಗಿ ಬದಲಾದ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆ ಇಂದಿನಿಂದಲೇ ಜಾರಿಗೆ ಬರಲಿದೆ.

Latest Indian news

Popular Stories