LPG gas price: ಎಲ್​ಪಿಜಿ ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ ಏರಿಕೆ

ನವದೆಹಲಿ, ಮಾರ್ಚ್​​ 1: ಎಲ್​ಪಿಜಿ ವಾಣಿಜ್ಯ ಬಳಕೆಯ 19 ಕೆಜಿ ಸಿಲಿಂಡರ್​ (LPG commercial cylinder) ಬೆಲೆ ಇಂದಿನಿಂದ (ಮಾರ್ಚ್​ 1) ಹೆಚ್ಚಳವಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ವಾಣಿಜ್ಯ ಬಳಕೆಯ ಪ್ರತಿ ಸಿಲಿಂಡರ್​ ಬೆಲೆಯನ್ನು 25 ರೂಪಾಯಿ ಏರಿಕೆ ಮಾಡಿವೆ.

ಇದರೊಂದಿಗೆ, ಸತತ ಎರಡನೇ ತಿಂಗಳು ಎಲ್​ಪಿಜಿ ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ ಹೆಚ್ಚಳವಾದಂತಾಗಿದೆ. ಈ ಬೆಲೆ ಏರಿಕೆಯೊಂದಿಗೆ, ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಗ್ಯಾಸ್ ಸಿಲಿಂಡರ್‌ನ ಚಿಲ್ಲರೆ ಬೆಲೆ 1,795 ರೂ. ಆಗಿದೆ. ಮುಂಬೈನಲ್ಲಿ ಇಂದಿನಿಂದ 19 ಕೆಜಿ ಸಿಲಿಂಡರ್ 1,749 ರೂ.ಗೆ ಮಾರಾಟವಾಗಲಿದೆ. ಚೆನ್ನೈ ಮತ್ತು ಕೋಲ್ಕತ್ತಾದಲ್ಲಿ, ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಬೆಲೆ ಕ್ರಮವಾಗಿ 1,960 ರೂ, ಮತ್ತು 1,911 ರೂ.ಗೆ ಏರಿಕೆಯಾಗಿದೆ. ಫೆಬ್ರವರಿ 1 ರಂದು 19 ಕೆಜಿ ಗ್ಯಾಸ್ ಸಿಲಿಂಡರ್ ದರ 14 ರೂ. ಹೆಚ್ಚಾಗಿತ್ತು.

Latest Indian news

Popular Stories