ಬುಡಕಟ್ಟು ವ್ಯಕ್ತಿಯ ಮೇಲೆ ಮೂತ್ರ ವಿಸರ್ಜನೆ ಪ್ರಕರಣ: ಆರೋಪಿಯ ಮೇಲೆ ರಾಷ್ಟ್ರೀಯ ಭದ್ರತಾ ಕಾಯಿದೆಯಡಿ ಪ್ರಕರಣ ದಾಖಲು – ಬಂಧನ

ಭೋಪಾಲ್:ಮಧ್ಯಪ್ರದೇಶದಲ್ಲಿ ಮತ್ತೊಬ್ಬ ವ್ಯಕ್ತಿಯ ಮೇಲೆ ಮೂತ್ರ ವಿಸರ್ಜನೆ ಮಾಡುತ್ತಿರುವುದು ಕ್ಯಾಮರಾದಲ್ಲಿ ಸೆರೆಯಾಗಿದ್ದ ಬಿಜೆಪಿ ಶಾಸಕನ ಆಪ್ತ ಪ್ರವೇಶ್ ಶುಕ್ಲಾ ಅವರನ್ನು ನಿನ್ನೆ ತಡರಾತ್ರಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ವೈರಲ್ ವಿಡಿಯೋದಲ್ಲಿ, ನೆಲದ ಮೇಲೆ ಕುಳಿತಿರುವ ಬುಡಕಟ್ಟು ವ್ಯಕ್ತಿಯ ಮೇಲೆ ಮೂತ್ರ ವಿಸರ್ಜಿಸುವಾಗ ಶುಕ್ಲಾ ಸಿಗರೇಟ್ ಸೇದುತ್ತಿರುವುದನ್ನು ಕಾಣಬಹುದಾಗಿದೆ. ಈ ವಿಡಿಯೋ ರಾಜ್ಯದಲ್ಲಿ ರಾಜಕೀಯ ಗದ್ದಲಕ್ಕೆ ಕಾರಣವಾಗಿದ್ದು, ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಆರೋಪಿ ವಿರುದ್ಧ ಕಟ್ಟುನಿಟ್ಟಿನ ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಪ್ರಕರಣ ದಾಖಲಿಸುವಂತೆ ಆದೇಶಿಸಿದ್ದಾರೆ.

ಪೊಲೀಸರ ಪ್ರಕಾರ, ಬಂಧನವನ್ನು ತಪ್ಪಿಸಲು ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ಪರಾರಿಯಾಗುತ್ತಿದ್ದ ಶುಕ್ಲಾನನ್ನು ಮಧ್ಯರಾತ್ರಿ 2 ಗಂಟೆಗೆ ಹಿಡಿದು ವಿಚಾರಣೆಗೆ ಒಳಪಡಿಸಲಾಯಿತು. ಅವರ ವಿರುದ್ಧ ರಾಷ್ಟ್ರೀಯ ಭದ್ರತಾ ಕಾಯ್ದೆ, ಎಸ್‌ಸಿ/ಎಸ್‌ಟಿ ಕಾಯ್ದೆ ಮತ್ತು ಭಾರತೀಯ ದಂಡ ಸಂಹಿತೆಯ ಇತರ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ತನಿಖೆಯ ಭಾಗವಾಗಿ, ಶುಕ್ಲಾ ಅವರ ಪತ್ನಿ ಮತ್ತು ಪೋಷಕರನ್ನು ಸಹ ವಿಚಾರಣೆಗೆ ಒಳಪಡಿಸಲಾಗಿದೆ.

Latest Indian news

Popular Stories