ಮಡಿಕೇರಿ ಸಮೀಪದ ಕಾಟಕೇರಿ ಬಳಿಕ ಟ್ಯಾಂಕರ್ ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿದ್ದು ಉಡುಪಿಯಿಂದ ಬೈಕ್‌ನಲ್ಲಿ ಮಡಿಕೇರಿ ಕಡೆಗೆ ಬರುತ್ತಿದ್ದ ಸಂದರ್ಭ ದುರ್ಘಟನೆ ನಡೆದಿದೆ.
ಮಡಿಕೇರಿಯ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಗಳು ಬೈಕ್ ನಲ್ಲಿದ್ದರು.
ಅಫಘಾತದಲ್ಲಿ ವಿಜೇಶ್ ಎಂಬಾತನ ಹೊಟ್ಟೆಭಾಗಕ್ಕೆ ಗಾಯವಾಗಿದ್ದು ಗಂಭೀರ ಸ್ಥಿತಿಯಲ್ಲಿ ಜಿಲ್ಲಾ ಆಸ್ಪತ್ರೆಗೆ ದಾಖಲಾಗಿದ್ದ. ಚಿಕಿತ್ಸೆ ಪಲಕಾರಿಯಾಗದೇ ಮೃತಪಟ್ಟಿದ್ದಾನೆ.
ಮತ್ತೋರ್ವ ವಿದ್ಯಾರ್ಥಿ ಶಿವಾನಂದ ಅವರ ಹೊಟ್ಟೆ ಭಾಗಕ್ಕೆ ಗಾಯವಾಗಿದ್ದು ಮಡಿಕೇರಿಯ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಇಬ್ಬರು ಸವಾರರು ಹೆಲ್ಮೆಟ್ ಧರಿಸಿದ್ದರು ಎನ್ನಲಾಗಿದ್ದು, ಅಫಘಾತದಲ್ಲಿ ಬೈಕ್ ನ ಮುಂಭಾಗ ನಜ್ಜುಗುಜ್ಜಾಗಿದೆ.ಮಡಿಕೇರಿ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಬೇಟಿ ಮುಂದಿನ ಕ್ರಮಕೈಗೊಂಡಿದ್ದಾರೆ