ಲೋಕಸಭೆ: ಹಣಕ್ಕಾಗಿ ಪ್ರಶ್ನೆ, ಟಿಎಂಸಿ ಸಂಸದೆ ಮಹುವಾ ಮೋಯಿತ್ರಾ ಉಚ್ಛಾಟನೆ, ಕಲಾಪ ಮುಂದೂಡಿಕೆ

ನವದೆಹಲಿ: ತೃಣಮೂಲ ಕಾಂಗ್ರೆಸ್‌ ಸಂಸದೆ (TMC MP) ಮಹುವಾ ಮೊಯಿತ್ರಾ (Mahua Moitra) ವಿರುದ್ಧದ ‘ಪ್ರಶ್ನೆಗಾಗಿ ಲಂಚ’ ಪಡೆದ ಪ್ರಕರಣದ ಕುರಿತು ಲೋಕಸಭೆಯಲ್ಲಿ ನೈತಿಕ ಸಮಿತಿ ವರದಿ ಮಂಡಿಸಿದ ಬೆನ್ನಲ್ಲೇ ಅವರನ್ನು ಉಚ್ಛಾಟನೆ ಮಾಡಲಾಗಿದೆ.

ಸಂಸದೆ ಮೊಯಿತ್ರಾ ಅವರನ್ನು ಉಚ್ಚಾಟಿಸುವಂತೆ ವರದಿ ಶಿಫಾರಸು ಮಾಡಿದ್ದು, ಇದೇ ವರದಿಯನ್ನು ಲೋಕಸಭೆಯಲ್ಲಿ ಇಂದು ಮಂಡಿಸಲಾಗಿತ್ತು. ಅಂತೆಯೇ ಕೇಂದ್ರ ಸರ್ಕಾರ ಕೂಡ ಮಹುವಾ ಕುರಿತು ನೈತಿಕ ಸಮಿತಿ ವರದಿ ಶಿಫಾರಸ್ಸನ್ನು ಬೆಂಬಲಿಸಿ ಇಂದು ಲೋಕಸಭೆಯಲ್ಲಿ ತನ್ನ ನಿರ್ಣಯ ಮಂಡಿಸಿತು. ಇದರ ಬೆನ್ನಲ್ಲೇ ಸ್ಪೀಕರ್ ಓಂ ಬಿರ್ಲಾ ಅವರು ಟಿಎಂಸಿ ಸಂಸದೆ ಮಹುವಾ ಮೋಯಿತ್ರಾ ಅವರನ್ನು ಸಂಸತ್ತಿನಿಂದ ಉಚ್ಛಾಟಿಸಿದ್ದಾರೆ. ಅಲ್ಲದೆ ಸದನವನ್ನು ಡಿಸೆಂಬರ್ 11ಕ್ಕೆ ಮುಂದೂಡಿದ್ದಾರೆ.

ಸಂಸದ ಮಹುವಾ ಮೊಯಿತ್ರಾ ಅವರ ನಡವಳಿಕೆಯು ಸಂಸದರಾಗಿ ಅನೈತಿಕ ಮತ್ತು ಅಸಭ್ಯವಾಗಿದೆ ಎಂಬ ಸಮಿತಿಯ ತೀರ್ಮಾನಗಳನ್ನು ಈ ಸದನ ಒಪ್ಪಿಕೊಳ್ಳುತ್ತದೆ. ಹಾಗಾಗಿ ಅವರು ಸಂಸದರಾಗಿ ಮುಂದುವರಿಯುವುದು ಸೂಕ್ತವಲ್ಲ ಎಂದು ಸ್ಪೀಕರ್ ಓಂ ಬಿರ್ಲಾ ಅವರು ಮೋಯಿತ್ರಾ ಅವರನ್ನು ಉಚ್ಛಾಟಿಸಿದ್ದಾರೆ.

Latest Indian news

Popular Stories