ಮಲ್ಪೆ ಬೀಚಿನಲ್ಲಿ ಸಮುದ್ರದ ಚಳಿತಕ್ಕೆ ಸಿಲುಕಿ, ಮಡಿಕೇರಿ ಮೂಲದ ಬಾಲಕಿಯೊಬ್ಬಳು ಮೃತಪಟ್ಟು ಇನ್ನೊರ್ವ ಬಾಲಕಿ ಅಪಾಯದಿಂದ ಪಾರಾಗಿರುವ ಘಟನೆ ಆ.5 ರಂದು ರಾತ್ರಿ 8.30 ರ ಸುಮಾರಿಗೆ ನಡೆದಿದೆ
ಮೃತರನ್ನು ಮಡಿಕೇರಿಯ ಮಾನ್ಯ(16) ಎಂದು ಗುರುತಿಸಲಾಗಿದೆ. ಈಕೆಯೊಂದಿಗೆ ನೀರಿನಲ್ಲಿ ಕೊಚ್ಚಿಕೊಂಡು ಹೋಗುತ್ತಿದ್ದ ಆಕೆಯ ಗೆಳತಿ ಯಶಸ್ವಿನಿ(16) ಎಂಬವರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇವರಿಬ್ಬರೂ ಮೂರು ದಿನಗಳ ಹಿಂದೆ ಮನೆ ಬಿಟ್ಟು ಮಂಗಳೂರು ಕಡೆಗೆ ಹೊರಟಿದ್ದರು ಎನ್ನಲಾಗಿದೆ. ರಾತ್ರಿ ವೇಳೆ ಮಲ್ಪೆ ಬೀಚಿನ ಸಮುದ್ರದಲ್ಲಿ ಆಟ ಆಡುತ್ತಿದ್ದ ವೇಳೆ ಅಬ್ಬರದ ಅಲೆಗಳಿಗೆ ಸಿಲುಕಿ ಇವರಿಬ್ಬರೂ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದರೆ ಎನ್ನಲಾಗಿದೆ.
ಇವರನ್ನು ಮುಳುಗುತಜ್ಞ ಈಶ್ವರ ಮಲ್ಪೆ ತಂಡ ರಕ್ಷಿಸಿ ತೀರಕ್ಕೆ ತಂದಿದ್ದು ಇದರಲ್ಲಿ ತೀವ್ರವಾಗಿ ಅಸ್ವಸ್ಥ ಗೊಂಡ ಮಾನ್ಯ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟಳು ಎಂದು ತಿಳಿದುಬಂದಿದೆ. ಯಶಸ್ವಿನಿ ಅವರನ್ನು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ ಈ ಬಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ