ಬೆಂಗಳೂರು : ಟ್ರಾಫಿಕ್ ಹಿನ್ನಲೆ 8 ಗಂಟೆಗೆ ಶಾಲೆ ಆರಂಭಿಸಿ ಮಧ್ಯಾಹ್ನ 3 ಗಂಟೆಗೆ ಬಿಡುವ ಬಗ್ಗೆ ಚಿಂತನೆ : ನಾಳೆ ಮಹತ್ವದ ನಿರ್ಧಾರ

ಬೆಂಗಳೂರು : ಟ್ರಾಫಿಕ್ ಸಮಸ್ಯೆ ಬೆಂಗಳೂರಿನಲ್ಲಿ ದಿನೇ ದಿನೇ ಹೆಚ್ಚಾಗುತ್ತಿದ್ದು ಶಾಲೆಗಳ ಸಮಯ ಬದಲಾವಣೆಗೆ ಹೈ ಕೋರ್ಟ್ ನಿರ್ದೇಶನ ಹೊರಡಿಸಿದೆ.ಶಿಕ್ಷಣ ಇಲಾಖೆ ಅ.5ರಂದು ಎಲ್ಲಾ ಭಾಗಿದಾರರ ಸಮಾಲೋಚನಾ ಸಭೆ ಆಯೋಜಿಸಿದೆ.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪ್ರಧಾನ ಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್ ಅಧ್ಯಕ್ಷತೆಯಲ್ಲಿ ಕೆ.ಆರ್.ವೃತ್ತದಲ್ಲಿರುವ ಸಮಗ್ರ ಶಿಕ್ಷಣ ಕಚೇರಿ ಸಭಾಂಗಣದಲ್ಲಿ ಬೆಳಿಗ್ಗೆ 11 ಗಂಟೆಗೆ ಸಭೆ ಕರೆಯಲಾಗಿದೆ.

ಪ್ರಸ್ತುತ ಶಾಲೆಗಳು ಬೆಳಗ್ಗೆ 9 ರಿಂದ ಸಂಜೆ 4 ಗಂಟೆಯವರೆಗೆ ನಡೆಯುತ್ತಿದೆ. ಸಂಚಾರ ದಟ್ಟಣೆ ಸಮಸ್ಯೆ ಹಿನ್ನೆಲೆಯಲ್ಲಿ ಬೆಳಗ್ಗೆ 8 ಗಂಟೆಗೆ ಶಾಲೆ ಆರಂಭಿಸಿ ಮಧ್ಯಾಹ್ನ 3 ಗಂಟೆಗೆ ಬಿಡುವ ಬಗ್ಗೆ ಚರ್ಚೆ ಚಿಂತನೆ ಇದೆ. ಪೊಲೀಸ್ ಇಲಾಖೆ, ಸಾರಿಗೆ ಇಲಾಖೆ, ಶಿಕ್ಷಣ ಇಲಾಖೆಯ ವಿವಿಧ ಅಧಿಕಾರಿಗಳು, ರಾಜ್ಯ ಸರ್ಕಾರಿ, ಖಾಸಗಿ, ಅನುದಾನಿತ ಶಾಲಾ ಶಿಕ್ಷಕರ ಸಂಘಗಳು, ವಿವಿಧ ಖಾಸಗಿ ಶಾಲಾ ಸಂಘಟನೆಗಳು, ಶಾಲಾ ವಾಹನ ಚಾಲಕರ ಸಂಘ, ಪೋಷಕರ ಸಂಘಟನೆಗಳಿಂದ ತಲಾ ಇಬ್ಬರು ಪ್ರತಿನಿಧಿಗಳನ್ನು ಸಭೆಗೆ ಆಹ್ವಾನಿಸಲಾಗಿದೆ.

Latest Indian news

Popular Stories