Featured StoryState News

ಮಂಗಳೂರು ಪಿಯು ವಿದ್ಯಾರ್ಥಿ ನಾಪತ್ತೆ ಪ್ರಕರಣ: ಪತ್ತೆಗೆ ಏಳು ಪೊಲೀಸ್ ತಂಡ ರಚನೆ

ಬೆಂಗಳೂರು: ಮಂಗಳೂರಿನಲ್ಲಿ ಕಾಣೆಯಾದ 17 ವರ್ಷದ ವಿದ್ಯಾರ್ಥಿ ಪತ್ತೆಗಾಗಿ ರಾಜ್ಯ ಸರ್ಕಾರ ಏಳು ಪೊಲೀಸ್ ತಂಡಗಳನ್ನು ರಚಿಸಿದೆ.

ದಿಗಂತ್ ಎಂಬ ಪಿಯುಸಿ ವಿದ್ಯಾರ್ಥಿ ಫೆಬ್ರವರಿ 25 ರಿಂದ ನಾಪತ್ತೆಯಾಗಿದ್ದು, ಈ ವಿಚಾರವನ್ನು ಬುಧವಾರ ವಿಧಾನಸಭೆಯಲ್ಲಿ ಶೂನ್ಯ ವೇಳೆಯಲ್ಲಿ ಸ್ಪೀಕರ್ ಯು.ಟಿ. ಖಾದರ್ ಪ್ರಸ್ತಾಪಿಸಿದರು.

ನಾಪತ್ತೆ ಪ್ರಕರಣದ ತನಿಖೆಯನ್ನು ಪರಿಶೀಲಿಸುವಂತೆ ಸರ್ಕಾರಕ್ಕೆ ಸೂಚಿಸಿದರು. ಇದಕ್ಕೆ ಗೃಹ ಸಚಿವ ಜಿ. ಪರಮೇಶ್ವರ ಅವರ ಪರವಾಗಿ ಉತ್ತರಿಸಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು, ದಿಗಂತ್ ದ್ವಿತೀಯ ಪಿಯುಸಿ ಓದುತ್ತಿದ್ದಾರೆ ಎಂದು ಸದನಕ್ಕೆ ತಿಳಿಸಿದರು.

ಫೆಬ್ರವರಿ 25 ರಂದು, ತನ್ನ ಹಾಲ್ ಟಿಕೆಟ್ ಪಡೆಯಲು ಕಾಲೇಜಿಗೆ ಹೋಗಿದ್ದ ವಿದ್ಯಾರ್ಥಿ, ನಂತರ ಮನೆಗೆ ಮರಳಿಲ್ಲ. ತನ್ನ ಕುಟುಂಬ ಸದಸ್ಯರಿಗೆ ದೇವಸ್ಥಾನಕ್ಕೆ ಹೋಗುತ್ತಿರುವುದಾಗಿ ದಿಗಂತ್ ತಿಳಿಸಿದ್ದರು. ಅಂದಿನಿಂದ ವಿದ್ಯಾರ್ಥಿ ಕಾಣೆಯಾಗಿದ್ದು, ಪೊಲೀಸರಿಗೆ ಆತನ ಮೊಬೈಲ್ ಫೋನ್ ಸಿಕ್ಕಿದೆ. ಆದರೆ ಯಾವುದೇ ಸುಳಿವು ಸಿಕ್ಕಿಲ್ಲ ಎಂದರು.

ಮಂಗಳೂರು ಜಿಲ್ಲೆಯ ಬಂಟ್ವಾಳ ಬಳಿಯ ಫರಂಗಿಪೇಟೆ ಪಟ್ಟಣದ ದ್ವಿತೀಯ ಪಿಯುಸಿ ವಿದ್ಯಾರ್ಥಿ ನಾಪತ್ತೆಯಾಗಿ ವಾರ ಕಳೆದರೂ ಯಾವುದೇ ಕ್ರಮ ಕೈಗೊಳ್ಳದ ಪೊಲೀಸರ “ನಿಷ್ಕ್ರಿಯತೆ” ಖಂಡಿಸಿ ಹಿಂದೂ ಪರ ಸಂಘಟನೆಗಳು ಮತ್ತು ಬಿಜೆಪಿ ಶನಿವಾರ ಫರಂಗಿಪೇಟೆ ಬಂದ್ ಮಾಡಿ, ಪ್ರತಿಭಟನೆ ನಡೆಸಿದ್ದವು.

Related Articles

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button