ಮಂಗಳೂರು: ಅಪಾರ್ಟ್‌ಮೆಂಟ್‌ನಲ್ಲಿ ಆಕಸ್ಮಿಕ ಬೆಂಕಿ: ಮಹಿಳೆ‌ ಮೃತ್ಯು

ಮಂಗಳೂರು: ನಗರದ ಅತ್ತಾವರದ ಫ್ಲ್ಯಾಟ್ ಒಂದರಲ್ಲಿ ನಡೆದ ಆಕಸ್ಮಿಕ ಬೆಂಕಿ ಅವಘಡದಲ್ಲಿ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ.

ಸಹೈನ್ ಮುಸಾಬ್ (57) ಮೃತಪಟ್ಟ ಮಹಿಳೆ.
ಶಾರ್ಟ್ ಸರ್ಕ್ಯೂಟ್‌ನಿಂದ ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.

IMG 20231128 WA0021 Featured Story, Dakshina Kannada IMG 20231128 WA0019 Featured Story, Dakshina Kannada

ಬೆಳ್ಳಂಬೆಳಗ್ಗೆ ಶಾರ್ಟ್ ಸರ್ಕ್ಯೂಟ್‌ನಿಂದ ಈ ಅವಘಡ ಸಂಭವಿಸಿದ್ದು, ಮನೆಯಲ್ಲಿದ್ದ ಇತರರು ಹೊರ ಬಂದಿದ್ದರು. ಆದರೆ ಮುಸಾಬ್ ಶೌಚಾಲಯದೊಳಗಿದ್ದ ಕಾರಣ ಹೊರಬರಲಾಗದೇ ಅಸ್ವಸ್ಥಗೊಂಡಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ನೀಡಲಾಯಿತು. ಅದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆಂದು ತಿಳಿದು ಬಂದಿದೆ.

Latest Indian news

Popular Stories