ಮಂಗಳೂರು: ನೂತನ ಪೊಲೀಸ್ ಆಯುಕ್ತರಾಗಿ ಅನುಪಮ್ ಅಗರ್‌ವಾಲ್ ಅಧಿಕಾರ ಸ್ವೀಕಾರ

ಮಂಗಳೂರು: ನಗರದ ನೂತನ ಪೊಲೀಸ್ ಆಯುಕ್ತರಾಗಿ ಅನುಪಮ್ ಅಗರ್‌ವಾಲ್ ಅಧಿಕಾರ ಸ್ವೀಕರಿಸಿದರು. ನಿರ್ಗಮಿತ ಆಯುಕ್ತ ಕುಲದೀಪ್ ಕುಮಾರ್ ಆರ್. ಜೈನ್ ಅವರು ಅಧಿಕಾರ ಹಸ್ತಾಂತರಿಸಿದರು.

ಕುಲದೀಪ್ ಕುಮಾರ್ ಆರ್. ಜೈನ್ ಅವರಿಗೆ ಸದ್ಯ ಯಾವುದೇ ಸ್ಥಾನ ತೋರಿಸಿಲ್ಲ. ನೂತನ ಆಯುಕ್ತ ಅಗರ್‌ವಾಲ್ ರಾಜಸ್ಥಾನದ ಜೋಧ್‌ಪುರದವರು. ಈ ಹಿಂದೆ ಕರ್ನಾಟಕ ಪೊಲೀಸ್ ಅಕಾಡೆಮಿಯ ನಿರ್ದೇಶಕರಾಗಿ, ದಾವಣಗೆರೆಯಲ್ಲಿ ಸಹಾಯಕ ಪೊಲೀಸ್ ವರಿಷ್ಠಾಧಿಕಾರಿಯಾಗಿ, ಬೆಳಗಾವಿಯಲ್ಲಿ ಉಪಪೊಲೀಸ್ ಆಯುಕ್ತರಾಗಿ ರಾಮನಗರ ಮತ್ತು ವಿಜಯಪುರದಲ್ಲಿ ಪೊಲೀಸ್ ವರಿಷ್ಠಾಧಿಕಾರಿಯಾಗಿ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದರು.

2011ನೇ ಬ್ಯಾಚ್‌ ನ ಐಪಿಎಸ್ ಅಧಿಕಾರಿಯಾದ ಕುಲದೀಪ್ ಕೇವಲ ಆರು ತಿಂಗಳ ಕಾಲ ಮಂಗಳೂರು ಪೊಲೀಸ್ ಆಯುಕ್ತರಾಗಿದ್ದು ಹಲವು ದಿಟ್ಟ ಕ್ರಮ, ಸುಧಾರಣೆಗಳನ್ನು ಕೈಗೊಂಡಿದ್ದರು.

Latest Indian news

Popular Stories