Featured StoryDakshina Kannada

ಮಂಗಳೂರು: ಕೋಟ್ಯಾಂತರ ರೂ. ಮೌಲ್ಯದ ಅಂಬರ್‌ಗ್ರೀಸ್ ಮಾರಾಟ ಯತ್ನ: ಮೂವರ ಬಂಧನ

ಮಂಗಳೂರು: ಕೋಟ್ಯಾಂತರ ರೂಪಾಯಿ ಬೆಲೆಬಾಳುವ ತಿಮಿಂಗಿಲದ ವಾಂತಿ (ಅಂಬರ್ ಗ್ರೀಸ್) ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದ ಮೂವರು ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದು, ಆರೋಪಿಗಳಿಂದ ಒಟ್ಟು 1,62,80,000/- ರೂ ಮೌಲ್ಯದ ಸೊತ್ತು ವಶಕ್ಕೆ ಪಡೆದಿದ್ದಾರೆ.

ಚಿಕ್ಕಮಗಳೂರು ಮೂಲದ ಸದ್ಯ ವಿಟ್ಲದಲ್ಲಿ ವಾಸವಿರುವ ಪ್ಯಾರೇಜಾನ್ ಅಲಿಯಾಸ್ ಸೇಟು (37), ವಿಟ್ಲದ ಬದ್ರುದ್ದೀನ್ ಅಲಿಯಾಸ್ ಬದ್ರು (28) ಹಾಗೂ ತಮಿಳುನಾಡಿನ ನಾಗಪಟ್ಟಣದ ರಾಜೇಶ್.ಆರ್, (22) ಬಂಧಿತರು.

ಬಂಧಿತರಿಂದ 1,57,50,000 ರುಪಾಯಿ ಮೌಲ್ಯದ 1.575 ಕೆಜಿ ತಿಮಿಂಗಿಲದ ವಾಂತಿ (ಅಂಬರ್ ಗ್ರೀಸ್), 10,000 ರುಪಾಯಿ ಮೌಲ್ಯದ ಮೂರು ಮೊಬೈಲ್, ಐದು ಲಕ್ಷ ರುಪಾಯಿ ಮೌಲ್ಯದ ಕಾರು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ 1,62,80,000 ರುಪಾಯಿ ಆಗಬಹುದು ಎಂದು ಪೊಲೀಸರು ತಿಳಿಸಿದ್ದಾರೆ.
ಶನಿವಾರದಂದು ಮಂಗಳೂರು ನಗರದ ಪಂಪ್ ವೆಲ್ ಬಳಿಯ ಇಂಡಿಯಾನ ಆಸ್ಪತ್ರೆಯ ಹತ್ತಿರ 4 ಜನ ವ್ಯಕ್ತಿಗಳು ಸ್ವಿಪ್ಟ್ ಕಾರಿನಲ್ಲಿ ತಿಮಿಂಗಿಲದ ವಾಂತಿ(ಅಂಬರ್ ಗ್ರೀಸ್) ಎಂಬ ಬೆಲೆಬಾಳುವ ವನ್ಯ ಜೀವಿ ಉತ್ಪನ್ನವನ್ನು ಗಿರಾಕಿಗಳಿಗೆ ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದಾರೆ ಎಂಬುದಾಗಿ ಬಂದ ಖಚಿತ ಮಾಹಿತಿ ಮೇರೆಗೆ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button