ಮಣಿಪುರ ಹಿಂಸಾಚಾರ: ಸಿಬಿಐ ತನಿಖೆ ಚುರುಕು, 53 ಅಧಿಕಾರಿಗಳ ಪೈಕಿ 29 ಮಹಿಳಾ ಅಧಿಕಾರಿಗಳ ನಿಯೋಜನೆ!

ನವದೆಹಲಿ: ಮಣಿಪುರ ಜನಾಂಗೀಯ ಹಿಂಸಾಚಾರ ಪ್ರಕರಣಗಳ ತನಿಖೆಯನ್ನು ಚುರುಕುಗೊಳಿಸಿರುವ ಸಿಬಿಐ ಬುಧವಾರ ವಿವಿಧ ಶ್ರೇಣಿಗಳಿಂದ 29 ಮಹಿಳಾ ಅಧಿಕಾರಿಗಳು ಸೇರಿದಂತೆ 53 ಅಧಿಕಾರಿಗಳನ್ನು ನಿಯೋಜಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಲವ್ಲಿ ಕಟಿಯಾರ್ ಮತ್ತು ನಿರ್ಮಲಾ ದೇವಿ ಸೇರಿದಂತೆ ಮೂವರು ಉಪ ಮಹಾ ನಿರೀಕ್ಷಕರ ಮಟ್ಟದ ಅಧಿಕಾರಿಗಳು (ಡೆಪ್ಯೂಟಿ ಇನ್ಸ್ ಪೆಕ್ಟರ್ ಜನರಲ್)  ರಾಜ್ಯದಲ್ಲಿನ ಹಿಂಸಾಚಾರ ಪ್ರಕರಣಗಳ ತನಿಖೆಗೆ ತಮ್ಮ ತಂಡಗಳನ್ನು ಮುನ್ನಡೆಸಲಿದ್ದಾರೆ ಎಂದು ಅವರು ಹೇಳಿದರು.

ಎಲ್ಲಾ ಅಧಿಕಾರಿಗಳು ಜಂಟಿ ನಿರ್ದೇಶಕ ಘನಶ್ಯಾಮ್ ಉಪಾಧ್ಯಾಯ ಅವರಿಗೆ ವರದಿ ಮಾಡಲಿದ್ದಾರೆ. ಅವರು ವಿವಿಧ ಪ್ರಕರಣಗಳ ತನಿಖೆಯನ್ನು ಮೇಲ್ವಿಚಾರಣೆ ಮಾಡುತ್ತಾರೆ ಎಂದು ಅಧಿಕಾರಿ ತಿಳಿಸಿದರು. 

ವಿಪಕ್ಷಗಳ ನಿಯೋಗದ ಸದಸ್ಯರ ಪ್ರಕಾರ ಮಣಿಪುರದಲ್ಲಿ ಮೇ ತಿಂಗಳಿನಿಂದಲೂ ನಡೆದ ಹಿಂಸಾಚಾರದಲ್ಲಿ ಒಟ್ಟು 179 ಜನರು ಸಾವನ್ನಪ್ಪಿದ್ದಾರೆ ಎಂದು ಅಂದಾಜಿಸಲಾಗಿದೆ. ಆದರೆ ಸ್ಥಳಾಂತರಗೊಂಡವರ ಸಂಖ್ಯೆ 60,000 ಮತ್ತು ಪರಿಹಾರ ಶಿಬಿರಗಳಲ್ಲಿ 40,000 ಎಂದು ಅಂದಾಜಿಸಲಾಗಿದೆ. ಸಾವಿರಾರು ಮನೆಗಳಿಗೆ ಬೆಂಕಿ ಹಚ್ಚಲಾಗಿದೆ ಎಂದು ವರದಿಯಾಗಿದೆ.

Latest Indian news

Popular Stories