ಮಣಿಪುರ: ಸಚಿವೆಯ ಮನೆಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

ಇಂಫಾಲ್: ಇಂಫಾಲ್ ಪಶ್ಚಿಮ ಜಿಲ್ಲೆಯ ಲ್ಯಾಂಫೆಲ್ ಪ್ರದೇಶದಲ್ಲಿ ಮಣಿಪುರದ ಮಹಿಳಾ ಸಚಿವೆ ನೆಮ್ಚಾ ಕಿಪ್‌ಗೆನ್ ಅವರ ಅಧಿಕೃತ ಕ್ವಾರ್ಟರ್ಸ್‌ಗೆ ಬುಧವಾರ ರಾತ್ರಿ ಅಪರಿಚಿತ ವ್ಯಕ್ತಿಗಳು ಬೆಂಕಿ ಹಚ್ಚಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಜನಾಂಗೀಯ ಕಲಹ ಪೀಡಿತ ಮಣಿಪುರದ ಖಮೆನ್‌ಲೋಕ್ ಪ್ರದೇಶದ ಹಳ್ಳಿಯೊಂದರ ಮೇಲೆ ಶಂಕಿತ ದುಷ್ಕರ್ಮಿಗಳು ದಾಳಿ ನಡೆಸಿದಾಗ ಒಂಬತ್ತು ಜನರು ಸಾವನ್ನಪ್ಪಿದರು ಮತ್ತು 10 ಜನರು ಗಾಯಗೊಂಡ ನಂತರ ಈ ಘಟನೆ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Latest Indian news

Popular Stories