ಮಣಿಪುರ ಹಿಂಸಾಚಾರ: ಗುಂಡಿನ ಚಕಮಕಿಯಲ್ಲಿ ಗೀತರಚನೆಕಾರ ಸೇರಿ ನಾಲ್ವರು ಮೃತ್ಯು

ಗುವಾಹಟಿ: ಮಣಿಪುರದಲ್ಲಿ ಹಿಂಸಾಚಾರ ಮುಂದುವರೆದಿದ್ದು, ಬುಧವಾರ ನಡೆದ ಗುಂಡಿನ ಚಕಮಕಿಯಲ್ಲಿ ಕುಕಿ-ಜೋ ಗೀತರಚನೆಕಾರ ಸೇರಿದಂತೆ ಕನಿಷ್ಠ ನಾಲ್ವರು ಸಾವನ್ನಪ್ಪಿದ್ದಾರೆ.

ಗೀತರಚನೆಕಾರ ಎಲ್ಎಸ್ ಮಂಗ್ಬೋಯಿ ಲುಂಗ್ಡಿಮ್ (42) ಮತ್ತು ಇತರ ಇಬ್ಬರು ಕುಕಿ-ಜೋ ಬುಡಕಟ್ಟು ಜನಾಂಗದವರು ನಿನ್ನೆ ನಡೆದ ಗುಂಡಿನ ಚಕಮಕಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಚುರಾಚಂದ್‌ಪುರ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಸಂಜೆ ನಂತರ ಲುಂಗ್ಡಿಮ್ ಅವರ ಆರೋಗ್ಯ ಸ್ಥಿತಿ ಹದಗೆಟ್ಟಾಗ, ಅವರನ್ನು ರಸ್ತೆಯ ಮೂಲಕ ಗುವಾಹಟಿಗೆ ಸ್ಥಳಾಂತರಿಸಲಾಯಿತು. ಆದರೆ ಗುರುವಾರ ಬೆಳಗ್ಗೆ ಅವರು ಸಾವನ್ನಪ್ಪಿದರು. ನಂತರ ಗಾಯಗೊಂಡಿದ್ದ ಮತ್ತೊಬ್ಬ ವ್ಯಕ್ತಿ ಸಹ ಸಾವನ್ನಪ್ಪಿದ್ದಾರೆ.

ಇನ್ನು ಇಂದು ನಡೆದ ಪ್ರತ್ಯೇಕ ಗುಂಡಿನ ಚಕಮಕಿಯಲ್ಲಿ ಇನ್ನಿಬ್ಬರು ಆದಿವಾಸಿಗಳು ಸಾವನ್ನಪ್ಪಿದ್ದು, ಇಬ್ಬರು ಆದಿವಾಸಿಗಳು ಗಾಯಗೊಂಡಿದ್ದಾರೆ.

Latest Indian news

Popular Stories