ಕಲಬುರ್ಗಿ: ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಭಾರೀ ಭದ್ರತಾ ಲೋಪ ಸಂಭವಿಸಿದೆ. ಕಲಬುರ್ಗಿ ಜಿಲ್ಲೆಯ ಜೇವರ್ಗಿ ಹೊರ ವಲಯದಲ್ಲಿ ನಿರ್ಮಿಸಲಾದ ತಾತ್ಕಾಲಿಕ ಹೆಲಿಪ್ಯಾಡ್ ನಲ್ಲಿ ಈ ಅಚಾತುರ್ಯ ಸಂಭವಿಸಿದೆ.
ಬಿ ಎಸ್ ಯಡಿಯೂರಪ್ಪ ಅವರಿದ್ದ ಹೆಲಿಕಾಪ್ಟರ್ ಲ್ಯಾಂಡಿಂಗ್ ಆಗುತ್ತಿದ್ದ ವೇಳೆ ಪ್ಲಾಸ್ಟಿಕ್ ಚೀಲಗಳು ಇದಕ್ಕಿದ್ದ ಹಾಗೆ ಹಾರಿ ಬಂದಿದ್ದವು. ಅವುಗಳು ಹೆಲಿಪ್ಯಾಡ್ ಮೇಲೆ ಬಿದ್ದಿದ್ದವು.
ಇದನ್ನು ಗಮನಿಸಿದ ಪೈಲಟ್ ತಕ್ಷಣ ಹೆಲಿಕಾಪ್ಟರ್ ಲ್ಯಾಂಡ್ ಮಾಡದೆ ಎತ್ತರ ಹೆಚ್ಚಿಸಿದ. ಬಳಿಕ ಪೊಲೀಸರು ಮತ್ತು ಇತರ ಸಿಬ್ಬಂದಿ ಪ್ಲಾಸ್ಟಿಕ್ ಚೀಲಗಳನ್ನು ತೆರವುಗೊಳಿಸಿದರು.
ಹೆಲಿಪ್ಯಾಡ್ ಮೇಲಿದ್ದ ಪ್ಲಾಸ್ಟಿಕ್ ಚೀಲಗಳನ್ನು ತೆರವುಗೊಳಿಸಿದ ಬಳಿಕ ಹೆಲಿಕಾಪ್ಟರ್ ಲ್ಯಾಂಡಿಂಗ್ ಆಗಿದೆ.
ಈ ಮೂಲಕ ಭಾರೀ ದುರಂತ ತಪ್ಪಿದೆ.