Featured StoryState News

ಕಾಂಗ್ರೆಸ್ ಪಕ್ಷ ಡಿಕೆಶಿ ಪರವಾಗಿದೆ: ಸಚಿವ ಎಂಬಿ ಪಾಟೀಲ

ಸಮಿಯುಲ್ಲಾ ಉಸ್ತಾದ

ವಿಜಯಪುರ: ಕಾಂಗ್ರೆಸ್ ಪಕ್ಷ ಡಿಸಿಎಂ ಡಿ.ಕೆ. ಶಿವಕುಮಾರ ಪರವಾಗಿದೆ ಎಂದು ಸಚಿವ ಎಂಬಿ ಪಾಟೀಲ ಹೇಳಿದರು.

ವಿಜಯಪುರದಲ್ಲಿಂದು ಡಿಸಿಎಂ ಹುದ್ದೆಗೆ ಡಿಕೆಶಿ ರಾಜೀನಾಮೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಮೇಲಿನ ಆರೋಪಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ಅಧೀನದಲ್ಲಿರುವ ಸಿಬಿಐ ತನಿಖೆ ನಡೆಸುತ್ತಿದೆ. ಆರೋಪ ಪಟ್ಟಿ ಇನ್ನೂ ಸಿಬಿಐ ಬಳಿಯೇ ಇದೆ. ವರದಿ ಸಲ್ಲಿಕೆಯಾದ ಬಳಿಕ ಸತ್ಯಾಸತ್ಯತೆ ಗೊತ್ತಾಗಲಿದೆ. ಹೀಗಾಗಿ ಆ ಬಗ್ಗೆ ಈಗಲೇ ಮಾತನಾಡುವುದು ಸರಿಯಲ್ಲ ಎಂದರು.

ಇದಕ್ಕೂ ಮೊದಲು ವಿಜಯಪುರ ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ವೃಕ್ಷೋತ್ಥಾನ ಹೆರಿಟೇಜ್ ರನ್ 2023ರ ಲಾಂಛನವನ್ನು ಸಚಿವ ಎಂಬಿ ಪಾಟೀಲ ಬಿಡುಗಡೆಗೊಳಿಸಿದರು.

ಕೋಟಿ ವೃಕ್ಷ ಅಭಿಯಾನ ಕಾರ್ಯಕ್ರಮ ಅಂಗವಾಗಿ ವೃಕ್ಷೋತ್ಥಾನ ಹೆರಿಟೇಜ್ ರನ್ ವಿಜಯಪುರ ನಗರದ ಡಾ.ಬಿ. ಆರ್. ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಡಿಸೆಂಬರ್ 24ಕ್ಕೆ ನಡೆಯಲಿದೆ ಎಂದು ಸಚಿವ ಎಂಬಿ ಪಾಟೀಲ ಹೇಳಿದರು.

ರನ್ನಿಂಗ್‌ನಲ್ಲಿ 3, 5, 10 ಹಾಗೂ 21 ಕಿಲೋಮೀಟರ್ ಓಟ ನಡೆಯಲಿದೆ. ಈ ಬಾರಿ ಕೆಜಿಎಫ್ ನಾಯಕ ನಟ ಯಶ್ ಕಾರ್ಯಕ್ರಮಕ್ಕೆ ಬರುವ ಭರವಸೆ ಇದೆ. ಅವರೊಂದಿಗೆ ನಾನು ಮಾತನಾಡುತ್ತೇನೆ ಎಂದರು.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button