ಬೆಂಗಳೂರಿನಲ್ಲಿ 24 ಕೋಟಿ ರೂ. ಮೌಲ್ಯದ MDMA ಜಪ್ತಿ, ವಿದೇಶಿ ಮಹಿಳೆ ಬಂಧನ

ಬೆಂಗಳೂರು: ಬೆಂಗಳೂರಿನಲ್ಲಿ ವಿದೇಶಿ ಮಹಿಳೆಯೊಬ್ಬರಿಂದ 24 ಕೋಟಿ ಮೌಲ್ಯದ 12 ಕೆಜಿ ನಿಷೇಧಿದ ಎಂಡಿಎಂಎ ಕ್ರಿಸ್ಟಲ್ ಅನ್ನು ಕೇಂದ್ರ ಅಪರಾಧ ವಿಭಾಗದ(ಸಿಸಿಬಿ) ಮಾದಕ ದ್ರವ್ಯ ನಿಗ್ರಹ ದಳ ಮಂಗಳವಾರ ಜಪ್ತಿ ಮಾಡಿದೆ.

ಸಿಸಿಬಿ ಮಾದಕ ದ್ರವ್ಯ ನಿಗ್ರಹ ದಳ ಹಾಗೂ ಕೆ.ಆರ್‌.ಪುರಂ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ, ಡ್ರಗ್ಸ್‌ ಮಾರಾಟ ಮಾಡುತ್ತಿದ್ದ ನೈಜೀರಿಯಾ ಮೂಲದ 40 ವರ್ಷದ ಮಹಿಳೆಯನ್ನು ಬಂಧಿಸಿ, 24 ಕೋಟಿ ಮೌಲ್ಯದ ಮಾದಕವಸ್ತುಗಳನ್ನು ಜಪ್ತಿ ಮಾಡಿದ್ದಾರೆ.

ಬಂಧಿತ ವಿದೇಶಿ ಮಹಿಳೆಯಿಂದ 12 ಕೆಜಿ ನಿಷೇಧಿದ ಎಂಡಿಎಂಎ, ಒಂದು ಮೊಬೈಲ್, 70 ಏರ್ಟೆಲ್ ಸಿಮ್ ಕಾರ್ಡ್ ಗಳನ್ನು ಜಪ್ತಿ ಮಾಡಲಾಗಿದೆ. ಇವುಗಳ ಮೌಲ್ಯ ಒಟ್ಟು 24 ಕೋಟಿ ರೂ. ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ ಅವರು ತಿಳಿಸಿದ್ದಾರೆ.

ಬೆಂಗಳೂರಿನ ಟಿಸಿ ಪಾಳ್ಯದಲ್ಲಿ ತಂಗಿದ್ದ ವಿದೇಶಿ ಮಹಿಳೆಯ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ ಎಂದು ಆಯುಕ್ತರು ಹೇಳಿದ್ದಾರೆ.

Latest Indian news

Popular Stories