ದಾರಿ ತಪ್ಪಿಸುವ ಜಾಹೀರಾತು ಪ್ರಕರಣ: ಸುಪ್ರೀಮ್’ನಲ್ಲಿ ಪತಂಜಲಿ ಸಂಸ್ಥೆ ಕ್ಷಮೆಯಾಚನೆ

ನವ ದೆಹಲಿ: ಪತಂಜಲಿ ಆಯುರ್ವೇದದ ವ್ಯವಸ್ಥಾಪಕ ನಿರ್ದೇಶಕ ಮತ್ತು ಯೋಗ ಗುರು ರಾಮ್‌ದೇವ್ ಅವರ ಸಹಾಯಕ ಆಚಾರ್ಯ ಬಾಲಕೃಷ್ಣ ಅವರು ತಮ್ಮ ಉತ್ಪನ್ನಗಳು ಮತ್ತು ಅವುಗಳ ಔಷಧೀಯ ಪರಿಣಾಮಕಾರಿತ್ವದ ಬಗ್ಗೆ ಕಂಪನಿಯ ತಪ್ಪುದಾರಿಗೆಳೆಯುವ ಜಾಹೀರಾತಿಗಾಗಿ ಸುಪ್ರೀಂ ಕೋರ್ಟ್‌ನಲ್ಲಿ ಕ್ಷಮೆಯಾಚಿಸಿದ್ದಾರೆ.

ದಾರಿತಪ್ಪಿಸುವ ಜಾಹೀರಾತುಗಳ ಮೇಲಿನ  ನೋಟಿಸ್‌ಗೆ ಪ್ರತಿಕ್ರಿಯಿಸದಿದ್ದಕ್ಕಾಗಿ ಪತಂಜಲಿ ಆಯುರ್ವೇದ್‌ ವನ್ನು ನ್ಯಾಯಾಲಯವು ತೀವ್ರ ತರಾಟೆಗೆ ತೆಗೆದುಕೊಂಡಿತ್ತು.
ನ್ಯಾಯಮೂರ್ತಿ ಹಿಮಾ ಕೊಹ್ಲಿ ಮತ್ತು ನ್ಯಾಯಮೂರ್ತಿ ಅಹ್ಸಾನುದ್ದೀನ್ ಅಮಾನುಲ್ಲಾ ಅವರ ಪೀಠವು ಏಪ್ರಿಲ್ 2 ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ಬಾಲಕೃಷ್ಣ ಮತ್ತು ರಾಮ್‌ದೇವ್‌ಗೆ ಸೂಚಿಸಿತ್ತು.

ನ್ಯಾಯಾಲಯಕ್ಕೆ ಸಲ್ಲಿಸಿದ ಅಫಿಡವಿಟ್‌ನಲ್ಲಿ ಬಾಲಕೃಷ್ಣ ಅವರು ಕಾನೂನು ಸುವ್ಯವಸ್ಥೆಗೆ ಹೆಚ್ಚಿನ ಗೌರವವನ್ನು ಹೊಂದಿದ್ದಾರೆ ಎಂದು ಹೇಳಿದ್ದಾರೆ. ” ಕ್ಷಮೆ” ಯಾಚಿಸಿ ಕಂಪನಿಯು “ಭವಿಷ್ಯದಲ್ಲಿ ಅಂತಹ ಜಾಹೀರಾತುಗಳನ್ನು ನೀಡುವುದಿಲ್ಲ ಎಂದು ಖಚಿತಪಡಿಸಿಕೊಳ್ಳುತ್ತದೆ” ಎಂದು ಹೇಳಿದರು.

Latest Indian news

Popular Stories