ಕಾಣೆಯಾಗಿದ್ದ ಯುವತಿ ಶವವಾಗಿ ಪತ್ತೆ; ಕೊಲೆ ಆರೋಪಿ ಬಂಧನ

ತೀರ್ಥಹಳ್ಳಿ: ನಾಪತ್ತೆಯಾಗಿದ್ದ ಯುವತಿ ಕೊಳೆತ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾದ ಘಟನೆ ತಾಲೂಕಿನ ಆಗುಂಬೆಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಕುಶಾಲ್ ಅವರ ಮಗಳಾದ ಪೂಜಾ ಎ.ಕೆ. (24) ಮೃತ ಯುವತಿ. ಕೊಲೆ ಆರೋಪಿ ಮಣಿಯನ್ನು ಬಂಧಿಸಲಾಗಿದೆ.

ಪೂಜಾ ಜೂ.30 ರಂದು ನಾಪತ್ತೆಯಾಗಿದ್ದು, ಶವವಾಗಿ ಪತ್ತೆಯಾಗಿದ್ದಾರೆ. ಈ ಪ್ರಕರಣದ ತನಿಖೆ ಆಗುಂಬೆ ಪೊಲೀಸ್ ಠಾಣೆ ಪಿ ಎಸ್ ಐ ರಂಗನಾಥ್ ಅಂತರಗಟ್ಟಿ ನೇತೃತ್ವದಲ್ಲಿ ನಡೆದಿದ್ದು, ನಾಲೂರು ಸಮೀಪದ ಮಣಿ ಎಂಬ ವ್ಯಕ್ತಿ ಕತ್ತು ಹಿಸುಕಿ ಕೊಲೆ ಮಾಡಿ ನಾಲೂರು ಸಮೀಪ ಹೊಂಡದಲ್ಲಿ ಹಾಕಿರುವುದಾಗಿ ಪೊಲೀಸರ ಬಳಿ ಒಪ್ಪಿಕೊಂಡಿದ್ದಾನೆ. ಶನಿವಾರ ರಾತ್ರಿ 11 ರ ವೇಳೆ ಆರೋಪಿ ಮಣಿಯನ್ನು ಘಟನೆ ನಡೆದ ಸ್ಥಳಕ್ಕೆ ಕರೆದು ಸ್ಥಳ ಮಹಜರು ಮಾಡಲಾಗಿದೆ. ಹೆಚ್ಚಿನ ತನಿಖೆ ನಡೆಸಲಾಗುತ್ತದೆ.

Latest Indian news

Popular Stories