Featured StoryState News

ಬಿಜೆಪಿ ಜೊತೆಗೆ ನನ್ನ ಸಂಬಂಧ ಮುಗಿದ ಅಧ್ಯಾಯ: ಕೆಆರ್​ಪಿಪಿ ಶಾಸಕ ಗಾಲಿ ಜನಾರ್ದನ ರೆಡ್ಡಿ

ಬೆಂಗಳೂರು, ನ.25: ಬಿಜೆಪಿ ಜೊತೆಗೆ ನನ್ನ ಸಂಬಂಧ ನೂರಕ್ಕೆ ನೂರು ಮುಗಿದ ಅಧ್ಯಾಯ ಎಂದು ಗಂಗಾವತಿ ಕ್ಷೇತ್ರದ ಕೆಆರ್​ಪಿಪಿ ಶಾಸಕ ಗಾಲಿ ಜನಾರ್ದನ ರೆಡ್ಡಿ (Gali Janardhana Reddy) ಹೇಳಿದರು. ವಿಧಾನಸಭೆ ಚುನಾವಣೆಯಲ್ಲಿ ಕಲ್ಯಾಣ ಕರ್ನಾಟಕ ಭಾಗದಲ್ಲಿ ಬಿಜೆಪಿಗೆ (BJP) ಗಾಲಿ ಜನಾರ್ದನ ರೆಡ್ಡಿ ಅವರು ಕಟ್ಟಿದ ಕೆಆರ್​ಪಿಪಿ ಪಕ್ಷ ದೊಡ್ಡ ಹೊಡೆತ ನೀಡಿತ್ತು. ಇದರಿಂದಾಗಿ ಎಚ್ಚೆತ್ತ ಬಿಜೆಪಿ, ಗಾಲಿ ಜನಾರ್ದನ ರೆಡ್ಡಿ ಅವರನ್ನು ಪಕ್ಷಕ್ಕೆ ಮರು ಸೇರ್ಪಡೆ ಮಾಡಲು ಮುಂದಾಗಿದ್ದಾರೆ.

ಬಿಜೆಪಿಗೆ ಮರಳಿ ಹೋಗುವುದನ್ನು ನಾನು ಕನಸು ಮನಸಿನಲ್ಲೂ ಯೋಚನೆ ಮಾಡಲ್ಲ. ಕೆಆರ್​ಪಿಪಿ ಪಕ್ಷದ ಸ್ಥಾಪಿಸಿದಾಗ ಯಾರೆಲ್ಲಾ ಎಷ್ಟೇ ಪ್ರಯತ್ನಿಸಿದರೂ ಯಾರ ಜೊತೆಗೂ ನಾನು ಹೊಂದಾಣಿಕೆ ಮಾಡಿಕೊಳ್ಳಲಿಲ್ಲ. ಸ್ವತಂತ್ರವಾಗಿಯೇ ನಾನು ಮುಂದೆ ಹೋಗುತ್ತೇನೆ ಎಂದರು.

ಲೋಕಸಭಾ ಚುನಾವಣೆ ದೃಷ್ಟಿಯಿಂದ ಯಾರೂ ನನ್ನ ಸಂಪರ್ಕ ಮಾಡಿಲ್ಲ, ನಾನೂ ಯಾರನ್ನೂ ಸಂಪರ್ಕ ಮಾಡಿಲ್ಲ.ನಾನು ಲೋಕಸಭಾ ಚುನಾವಣೆಗೆ ಸ್ಫರ್ಧೆ ಮಾಡುವುದಿಲ್ಲ. ಆದರೆ, ಎಂಟು ಕ್ಷೇತ್ರಗಳಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಕೆಲಸ ಮಾಡುತ್ತೇನೆ ಎಂದರು.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button