ಮಾಜಿ ಶಾಸಕ ವಸಂತ ಬಂಗೇರಾ ನಿಧನ

ಮಂಗಳೂರು: ಬೆಳ್ತಂಗಡಿಯ ಮಾಜಿ ಶಾಸಕ, ಕಾಂಗ್ರೆಸ್ ಮುಖಂಡ ವಸಂತ ಬಂಗೇರಾ ಬೆಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಅವರು ಐದು ಬಾರಿ ಬೆಳ್ತಂಗಡಿ ಕ್ಷೇತ್ರದ ಶಾಸಕರಾಗಿದ್ದರು. ಇತ್ತೀಚೆಗೆ ಅವರ ಆರೋಗ್ಯ ಹದಗೆಟ್ಟ ಹಿನ್ನೆಲೆಯಲ್ಲಿ ಚಿಕತ್ಸೆಗೆಂದು ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಬುಧವಾರ ಸಂಜೆ ನಿಧನರಾಗಿದ್ದಾರೆಂದು ತಿಳಿದು ಬಂದಿದೆ.

Latest Indian news

Popular Stories