ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಎಂಎಲ್​​ಸಿ ಸೂರಜ್ ರೇವಣ್ಣ ಬಂಧನ

ಅಸಹಜ ಲೈಂಗಿಕ ದೌರ್ಜನ್ಯ ಎಂದು ನನ್ನ ಮೇಲೆ ಸುಳ್ಳು ದೂರು ದಾಖಲಾಗಿದೆ. ಮತ್ತು ಬ್ಲ್ಯಾಕ್​ಮೇಲ್​ ಮಾಡಲಾಗುತ್ತಿದೆ ಎಂದು ಸೂರಜ್​ ರೇವಣ್ಣ ಅವರು ದೂರು ನೀಡುಲು ಹಾಸನದ ಸೆನ್​ ಠಾಣೆಗೆ ಹೋಗಿದ್ದರು.

ಈ ವೇಳೆ ಪೊಲೀಸರು ಸೂರಜ್​ ರೇವಣ್ಣ ಅವರನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿದರು. ಇದೀಗ ಬಂಧಿಸಿದ್ದಾರೆ.

ಶನಿವಾರ ಸಂತ್ರಸ್ತ ನೀಡಿದ್ದ ದೂರು ಆಧರಿಸಿ ಹೊಳೆನರಸೀಪುರ ಗ್ರಾಮಾಂತ ಪೊಲೀಸ್​ ಠಾಣೆಯಲ್ಲಿ ಸೆಕ್ಷನ್​​ 377 (ಅಸ್ವಾಭಾವಿಕ ಅಪರಾಧ), 342 (ತಪ್ಪಾದ ಬಂಧನಕ್ಕೆ ಶಿಕ್ಷೆ) ಹಾಗೂ 506 (ಬೆದರಿಕೆ) ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಡಿಜಿಪಿ ಕಚೇರಿಯಲ್ಲಿ ದೂರು ನೀಡಿದ್ದ ಸಂತ್ರಸ್ತ ಹಾಸನ ಎಸ್ಪಿಗೂ ದೂರಿನ ಪ್ರತಿಯನ್ನು ಮೇಲ್ ಮಾಡಿದ್ದರು.

ಸೂರಜ್​ ರೇವಣ್ಣ ಅವರು ತಮ್ಮ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಅರಕಲಗೂಡು ಮೂಲದ ಜೆಡಿಎಸ್​​ ಕಾರ್ಯಕರ್ತರೊಬ್ಬರು ಶನಿವಾರ ಹೊಳೆನರಸೀಪುರ ಗ್ರಾಮಾಂತರ ಪೊಲೀಸ್​ ಠಾಣೆಗೆ ದೂರು ನೀಡಿದ್ದಾರೆ. ಈ ದೂರಿನನ್ವಯ ಸೂರಜ್​ ವಿರುದ್ಧ ಅನೈಸರ್ಗಿಕ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಾಗಿದೆ.

Latest Indian news

Popular Stories