ಉಡುಪಿ (Udupi) ಯಲ್ಲಿ ಪೋಸ್ಕೊ ಪ್ರಕರಣವೊಂದು ಸದ್ದು ಮಾಡಿದೆ.. ಈ ಪ್ರಕರಣದಲ್ಲಿ ಉದ್ಯಮಿಯಾಗಿರುವ ಶ್ರೇಯಸ್ ನಾಯ್ಕ (25) ಎಂಬ ಆರೋಪಿ ತನ್ನ ಪ್ರಭಾವ ಬಳಸಿ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ.
ಉಡುಪಿಯ ಕುಂದಾಪುರ ತಾಲೂಕಿನ ಅಮಾವಾಸ್ಯೆಬೈಲು ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಆರೋಪಿ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗುತ್ತಿದ್ದಂತೆ ಆರೋಪಿ ಪರಾರಿಯಾಗಿದ್ದಾನೆ.
ಪೊಲೀಸ್ ಹೇಳಿಕೆ:
ಮೇ 18 ರಂದು ಅಮಾಸೆಬೈಲು ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿತ್ತು. ನ್ಯಾಯಾಧೀಶರ ಮುಂದೆ ಸಂತ್ರಸ್ತರ ಹೇಳಿಕೆಯಂತೆ ಇಬ್ಬರೂ ಒಂದೇ ಮರಾಠ ನಾಯಕ (ಎಸ್ಟಿ) ಸಮುದಾಯದವರಾಗಿದ್ದು, ಸ್ವಲ್ಪ ಸಮಯದಿಂದ ಪರಸ್ಪರ ಸಂಪರ್ಕದಲ್ಲಿದ್ದರು. ಆರೋಪಿ ತಲೆಮರೆಸಿಕೊಂಡಿದ್ದಾನೆ.
ಸುಲಿಗೆ ಅಥವಾ ವೀಡಿಯೊ ರೆಕಾರ್ಡಿಂಗ್ಗೆ ಸಂಬಂಧಿಸಿದಂತೆ ಈಗಿನಂತೆ ನಮ್ಮ ಬಳಿ ಯಾವುದೇ ಮಾಹಿತಿ ಇಲ್ಲ. ನ್ಯಾಯಾಧೀಶರ ಮುಂದೆ ನೀಡಿದ ಹೇಳಿಕೆಯಲ್ಲಿ ಸಂತ್ರಸ್ತೆ ಕೂಡ ವಿಡಿಯೋ ರೆಕಾರ್ಡಿಂಗ್ ಅಥವಾ ಸುಲಿಗೆ ಬಗ್ಗೆ ಏನನ್ನೂ ಹೇಳಿಲ್ಲ. ಅವರ ಲ್ಯಾಪ್ಟಾಪ್ ಕೂಡ ವಶಪಡಿಸಿಕೊಳ್ಳಲಾಗಿದೆ. ನಾವು ಅದನ್ನು ಹೊರತೆಗೆಯಲು ಕಳುಹಿಸುತ್ತೇವೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.