ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ಮೋದಿ: ಇಸ್ರೋ ವಿಜ್ಞಾನಿಗಳೊಂದಿಗೆ ಸಂವಾದ ನಡೆಸಲಿರುವ ಪ್ರಧಾನಿ

ಬೆಂಗಳೂರು: ಅಥೆನ್ಸ್ ಪ್ರವಾಸದಿಂದ ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿನ ಹೆಚ್ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ. 

ಬೆಳಿಗ್ಗೆ 5:55 ಕ್ಕೆ ಪ್ರಧಾನಿ ನರೇಂದ್ರ ಮೋದಿ ಹೆಚ್ಎಎಲ್ ವಿಮಾನ ನಿಲ್ದಾಣ ತಲುಪಿದ್ದು ಇನ್ನೂ ಅರ್ಧ ಗಂಟೆಯ ಸಮಯ ವಿಮಾನ ನಿಲ್ದಾಣದಲ್ಲೇ ಪ್ರಧಾನಿ ಮೋದಿ ವಿಶ್ರಾಂತಿ ಪಡೆಯಲಿದ್ದಾರೆ. 

ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಧಾನಿ ಮೋದಿ ಅವರನ್ನು ಬಿಜೆಪಿ ನಾಯಕರು ಸ್ವಾಗತಿಸಿದರು. 

ಚಂದ್ರಯಾನ-3 ಯಶಸ್ವಿಯಾಗಿರುವ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಇಸ್ರೋ ಕೇಂದ್ರಕ್ಕೆ ಭೇಟಿ ನೀಡಲಿದ್ದಾರೆ. ಬೆಳಿಗ್ಗೆ 7 ಗಂಟೆ ವೇಳೆಗೆ ಇಸ್ರೋ ಕೇಂದ್ರಕ್ಕೆ ತೆರಳಲಿರುವ ಪ್ರಧಾನಿ ಮೋದಿ ವಿಜ್ಞಾನಿಗಳೊಂದಿಗೆ ಸಂವಾದ ನಡೆಸಲಿದ್ದಾರೆ. 

Latest Indian news

Popular Stories