ರಂಗೇರಿದ ಲೋಕಸಭಾ ಚುನಾವಣೆ ಅಖಾಡ: ಮಾ.15 ರಿಂದ 4 ದಿನ ಕರ್ನಾಟದಲ್ಲಿ ಪ್ರಧಾನಿ ಮೋದಿ ಪ್ರಚಾರ

ಬೆಂಗಳೂರು: ಲೋಕಸಭಾ ಚುನಾವಣೆಗೆ ಇನ್ನೂ ದಿನಾಂಕ ಘೋಷಣೆಯಾಗಿಲ್ಲ. ಆದೆರೆ, ಈ ನಡುವಲ್ಲೇ ಪ್ರಬಲ ಪಕ್ಷಗಳು ಚುನಾವಣೆಗೆ ಸಿದ್ಧತೆಗಳ ನಡೆಸುತ್ತಿದ್ದು, ಕೇಂದ್ರ ನಾಯಕರ ಮೂಲಕ ಮತದಾರರನ್ನು ಸೆಳೆಯಲು ಮುಂದಾಗಿವೆ.

ಈ ನಿಟ್ಟಿನಲ್ಲಿ ಚುನಾವಣೆ ಸಂದರ್ಭದಲ್ಲಿ ಹೆಚ್ಚು ಮತದಾರರ ಗಮನ ಸೆಳೆಯಲು ರಾಜ್ಯದಲ್ಲಿ ಪ್ರಧಾನಿ ಮೋದಿ ಅವರು ಪ್ರಚಾರ ಮಾಡುತ್ತಿದ್ದಾರೆ.

ಮಾರ್ಚ್ 15 ರಿಂದ 19 ರವರೆಗೆ ದಕ್ಷಿಣದ 5 ರಾಜ್ಯಗಳಲ್ಲಿ ಮೋದಿ ಪ್ರವಾಸ ಕೈಗೊಳ್ಳಲಿದ್ದಾರೆ. ಈ ವೇಳೆ ಕರ್ನಾಟಕದ 12 ಲೋಕಸಭಾ ಕ್ಷೇತ್ರಗಳನ್ನು ಗುರಿಯಾಗಿಸಿಕೊಂಡು ಪ್ರವಾಸ ನಡೆಸಲಿದ್ದಾರೆ. ಈ ಮೂಲಕ ಮತ್ತೊಮ್ಮೆ ಕೇಂದ್ರದಲ್ಲಿ ಬಿಜೆಪಿ ಸರ್ಕಾರವನ್ನು ಆಡಳಿತಕ್ಕೆ ತರಲು ತಂತ್ರ ಹೆಣೆಯಲಾಗುತ್ತಿದೆ.

ಮಾ.15 ರಂದು ಕೋಲಾರಕ್ಕೆ ಭೇಟಿ ನೀಡಲಿದ್ದು, ಇದೇ ವೇಳೆ ತುಮಕೂರು, ಚಿಕ್ಕಬಳ್ಳಾಪುರ ಕ್ಷೇತ್ರಗಳ ಮೇಲೂ ಗಮನ ಹರಿಸಲಿದ್ದಾರೆ.

ಮಾ.17 ರಂದು ಶಿವಮೊಗ್ಗ ಕ್ಷೇತ್ರಕ್ಕೆ ಭೇಟಿ ನೀಡಲಿದ್ದು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ-ಚಿಕ್ಕಮಗಳೂರು ಕ್ಷೇತ್ರಗಳ ಬಗ್ಗೆ ವಿಶೇಷ ಗಮನ ನೀಡಲಿದ್ದಾರೆ.

ಮಾ.18 ರಂದು ಬೀದರ್ ಹಾಗೂ ಕಲಬುರಗಿ ಮತ್ತು ಮಾ.19 ರಂದು ಧಾರವಾಡಕ್ಕೆ ಭೇಟಿ ನೀಡಲಿದ್ದು, ಬೆಳಗಾವಿ, ಹಾವೇರಿ ಜಿಲ್ಲೆಗಳ ಮೇಲೆ ಫೋಕಸ್ ಮಾಡಲಿದ್ದಾರೆ.

ಈ ವೇಳೆ ಕೆಲವು ಕಾಮಗಾರಿಗಳಿಗೆ ಚಾಲನೆ ನೀಡಲಿದ್ದು, ಕೆಲವು ಉದ್ಘಾಟನಾ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆಂದು ತಿಳಿದುಬಂದಿದೆ.

Latest Indian news

Popular Stories