
Featured StoryState News
ರಾಜ್ಯದಲ್ಲಿ ನೈತಿಕ ಪೊಲೀಸ್‌ಗಿರಿಗೆ ಅವಕಾಶ ಇಲ್ಲ : ಒಂದು ವೇಳೆ ಅಂತಹ ಘಟನೆ ನಡೆದರೆ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ – ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಆಲೋಕ್ ಮೋಹನ್
ಬೆಂಗಳೂರು: ರಾಜ್ಯದಲ್ಲಿ ನೈತಿಕ ಪೊಲೀಸ್‌ಗಿರಿಗೆ ಅವಕಾಶ ಇಲ್ಲ. ಒಂದು ವೇಳೆ ಅಂತಹ ಘಟನೆ ನಡೆದರೆ ತಪ್ಪಿತಸ್ಥರ ವಿರುದ್ಧ ಕಠಿನ ಕ್ರಮ ಕೈಗೊಳ್ಳುವುದಾಗಿ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಆಲೋಕ್ ಮೋಹನ್ ಎಚ್ಚರಿಕೆ ನೀಡಿದ್ದಾರೆ.
ಗುರುವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಹಾವೇರಿಯಲ್ಲಿ ನಡೆದ ನೈತಿಕ ಪೊಲೀಸ್ ಗಿರಿ ಪ್ರಕರಣದಲ್ಲಿ ಈಗಾಗಲೇ ಆರೋಪಿಗಳನ್ನು ಬಂಧಿಸಲಾಗಿದೆ. ಇಂಥ ಘಟನೆಗಳು ಮರುಕಳಿಸದಂತೆ ಮುನ್ನೆಚ್ಚರಿಕೆ ಕ್ರಮ ಜಿಲ್ಲಾ ಹಾಗೂ ವಿಭಾಗದ ಘಟಕದ ಮುಖ್ಯಸ್ಥರಿಗೆ ಸೂಚಿಸಲಾಗಿದೆ. ಇನ್ಮುಂದೆ ಯಾರೇ ನೈತಿಕ ಪೊಲೀಸ್‌ಗಿರಿಗೆ ಮುಂದಾದರೂ ಕಠಿನ ಕ್ರಮ ಕೈಗೊಳ್ಳುತ್ತೇವೆ. ಕಾನೂನು ಎಲ್ಲರಿಗೂ ಒಂದೇ ಎಂದು ಎಚ್ಚರಿಸಿದ್ದಾರೆ.




