ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರಂತರವಾಗಿ ನಡೆಯುತ್ತಿರುವ ನೈತಿಕ ಪೊಲೀಸ್ ಗಿರಿ ಪ್ರಕರಣ ಸಂಬಂಧ ಮಂಗಳೂರು ವಿಮಾನ ನಿಲ್ದಾಣದಲ್ಲಿ ದಕ್ಷಿಣ ಕನ್ನಡ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಪ್ರತಿಕ್ರಿಯಿಸಿದ್ದಾರೆ.
ಕಾನೂನು ಬಾಹಿರ ಚಟುವಟಿಕೆಗಳಿಗೆ ಅವಕಾಶ ನೀಡುವುದಿಲ್ಲ. ಇದನ್ನು ಅನೈತಿಕ ಪೊಲೀಸ್ ಗಿರಿ ಅಂತಾ ಕರೆಯಬೇಕಾಗುತ್ತದೆ. ಕಾನೂನನ್ನು ಕೈಗೆ ತೆಗೆದುಕೊಳ್ಳೋದು, ಹಲ್ಲೆ ಮಾಡೋದು, ಭಯ ಸೃಷ್ಠಿಸೋದನ್ನು ದಬ್ಬಾಳಿಕೆ ಸಹಿಸಲು ಸಾಧ್ಯವಿಲ್ಲ. ಪೊಲೀಸರಿಗೆ ಕಠಿಣ ಕ್ರಮಕ್ಕೆ ಸೂಚನೆ ನೀಡಿದ್ದೇನೆ ಎಂದರು.