ಬಿಜೆಪಿ ತೊರೆದ ಸಂಸದ ಬಿ.ಎನ್ ಬಚ್ಚೇಗೌಡ, ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ

ಸಂಸದ ಬಿ.ಎನ್. ಬಚ್ಚೇಗೌಡ (BN Bachegowda) ಅವರು ಬಿಜೆಪಿ ತೊರೆದಿದ್ದಾರೆ. ಬಿಜೆಪಿ (BJP) ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.

ಮೂರು ದಿನಗಳ ಹಿಂದೆಯೇ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರರಿಗೆ (BY Vijayendra) ರಾಜೀನಾಮೆ ಪತ್ರ ರವಾನಿಸಿರುವ ಮಾಹಿತಿ ಸಿಕ್ಕಿದೆ. ಸ್ವ ಇಚ್ಚೆಯಿಂದ ರಾಜೀನಾಮೆ ಸಲ್ಲಿಸುತ್ತಿರೋದಾಗಿ ಪತ್ರದಲ್ಲಿ ಉಲ್ಲೇಖಿಸಲಾಗಿದೆ.

‘ಸ್ವ ಇಚ್ಛೆಯಿಂದ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ. ರಾಜೀನಾಮೆ ಅಂಗೀಕರಿಸಬೇಕು ಎಂದು ಕೋರುತ್ತೇನೆ’ ಎಂದು ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರಿಗೆ ಬರೆದಿರುವ ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದಾರೆ. 2008ರಲ್ಲಿ ಬಿಜೆಪಿ ಪ್ರಾಥಮಿಕ ಸದಸ್ಯತ್ವ ಪಡೆದು ಶಾಸಕ, ಸಚಿವ, ಸಂಸದನಾಗಿ ಸಾರ್ವಜನಿಕ ಕೆಲಸ ಮಾಡಲು ಅವಕಾಶ ಮಾಡಿಕೊಟ್ಟ ಪಕ್ಷಕ್ಕೆ ಮತ್ತು ಪಕ್ಷದ ಹಿರಿಯ ಮುಖಂಡರಿಗೆ ಧನ್ಯವಾದ ಅರ್ಪಿಸುವುದಾಗಿ ಹೇಳಿದ್ದಾರೆ.

Latest Indian news

Popular Stories