ವಿವಾದಾತ್ಮಕ ಹೇಳಿಕೆಯ ಕುರಿತು ತಮಿಳುನಾಡು ಜನರ ಕ್ಷಮೆ ಕೇಳಿದ ಸಂಸದೆ ಶೋಭಾ ಕರಂದ್ಲಾಜೆ!

ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಫೋಟದ ಪ್ರಕರಣದಲ್ಲಿ ಭಾಗಿಯಾದವರು ತಮಿಳುನಾಡಿನಲ್ಲಿ ತರಬೇತಿ ಪಡೆದವರು ಎಂಬ ಹೇಳಿಕೆಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ತಮಿಳುನಾಡಿನ ಜನರ ಕ್ಷಮೆಯಾಚಿಸಿದ್ದಾರೆ.

ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟದ ಕುರಿತು ಮಾತನಾಡಿದ ಶೋಭಾ, ತಮಿಳುನಾಡು ಜನರ (Tamil Nadu people) ಭಾವನೆಗಳಿಗೆ ಧಕ್ಕೆ ತರುವ ಉದ್ದೇಶದಿಂದ ನಾನು ಈ ಹೇಳಿಕೆ ನೀಡಲಿಲ್ಲ.

ನಾನು ಮಾಡಿದ ಆಪಾದಿತ ಹೇಳಿಕೆಯಿಂದಾಗಿ ಅವರ ಕ್ಷಮೆ ಕೋರುತ್ತೇನೆ ಎಂದು ಕೇಂದ್ರ ಸಚಿವೆ ಹೇಳಿದ್ದಾರೆ.

ತಮಿಳುನಾಡಿನ ಇತಿಹಾಸ, ಶ್ರೀಮಂತ ಸಂಸ್ಕೃತಿ, ಸಂಪ್ರದಾಯ ಮತ್ತು ಜನರ ಬಗ್ಗೆ ನನಗೆ ಹೆಚ್ಚಿನ ಗೌರವ ಇದೆ. ತಮಿಳುನಾಡಿನ ಜನರ ಭಾವನೆಗಳನ್ನು ನೋಯಿಸುವ ಯಾವುದೇ ಉದ್ದೇಶ ನನ್ನದಾಗಿರಲಿಲ್ಲ. ಆದ್ದರಿಂದ, ನನ್ನ ಹೇಳಿಕೆಯಿಂದ ಯಾವುದೇ ನೋವನ್ನು ಉಂಟು ಮಾಡಿದ್ದಕ್ಕಾಗಿ ನಾನು ಮತ್ತೊಮ್ಮೆ ತಮಿಳುನಾಡಿನ ಜನತೆಗೆ ಕ್ಷಮೆಯಾಚಿಸುತ್ತೇನೆ. ನ್ಯಾಯದ ಹಿತಾಸಕ್ತಿಯಿಂದ ಈ ಹೇಳಿಕೆ ನೀಡಿದ್ದೇನೆ, ಹಾಗಂತ ಉದ್ದೇಶಿತವಲ್ಲ ಎಂದು ಹೇಳಿದ್ದಾರೆ.

ಈ ಕುರಿತು ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿ ಮದ್ರಾಸ್ ಹೈಕೋರ್ಟ್​​ನಲ್ಲಿ ಅರ್ಜಿ ಸಲ್ಲಿಸಲಾಗಿದ್ದು, ಅದರ ವಿಚಾರಣೆ ಸೆಪ್ಟೆಂಬರ್​ 3 ರಂದು ನಡೆಯಿತು. ಶೋಭಾ ಪರ ವಾದ ಮಂಡಿಸಿದ ವಕೀಲರು, ಸಚಿವರ ಹೇಳಿಕೆಗೆ ಸಂಬಂಧಿಸಿ ತಮಿಳುನಾಡು ಜನರ ಕ್ಷಮೆಯಾಚಿಸುವುದಾಗಿ ಅಫಿಡವಿಟ್ ಸಲ್ಲಿಸಲಾಗಿದೆ. ತಮಿಳುನಾಡಿನ ಮುಖ್ಯ ಪಬ್ಲಿಕ್ ಪ್ರಾಸಿಕ್ಯೂಟರ್, ಸರ್ಕಾರದಿಂದ ಸೂಕ್ತ ಸೂಚನೆ ಪಡೆದ ನಂತರ ತಿಳಿಸುವೆ ಎಂದು ಹೇಳಿದ್ದಾರೆ.

Latest Indian news

Popular Stories