ಲೋಕಸಭಾ ಚುನಾವಣಾ ಅಖಾಡದಿಂದ ಹಿಂದೆ ಸರಿದ ದಿಂಗಾಲೇಶ್ವರ ಶ್ರೀ

ಹುಬ್ಬಳ್ಳಿ-ಧಾರವಾಡ ಲೋಕಸಭಾ ಕ್ಷೇತ್ರದಿಂದ ಪಕ್ಷೇತರವಾಗಿ ಕಣಕ್ಕೆ ಇಳಿದಿದ್ದ ಶಿರಹಟ್ಟಿಯ ಬಾಳೆಹೊಸೂರು ಫಕೀರೇಶ್ವರ ಮಠದ ಶ್ರೀ ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸ್ಪರ್ಧೆಯಿಂದ ಹಿಂದೆ ಸರಿದಿದ್ದಾರೆ.

ದಿಂಗಾಲೇಶ್ವರ ಶ್ರೀಗಳು ನಾಪಮಪತ್ರವನ್ನು ಹಿಂಪಡೆದಿದ್ದಾರೆ. ದಿಂಗಾಲೇಶ್ವರ ಸ್ವಾಮೀಜಿ ತಮ್ಮ ಸೂಚಕಾರದ ಸಚ್ಚಿನ್​ ಪಾಟೀಲ್​ ಮತ್ತು ಅಮೃತ ಬಳ್ಳೊಳ್ಳಿ ಮೂಲಕ ನಾಮಪತ್ರ ಚುನಾವಣಾ ಆಯೋಗದಿಂದ ತರೆಸಿದ್ದಾರೆ.

ಫಕೀರ ದಿಂಗಾಲೇಶ್ವರ ಸ್ವಾಮೀಜಿ, ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ ಅವರ ವಿರುದ್ಧ ಸಮರ ಸಾರಿದ್ದು, ಅಭ್ಯರ್ಥಿಯನ್ನು ಬದಲಿಸುವಂತೆ ಪಟ್ಟು ಹಿಡಿದಿದ್ದರು. ಇದಕ್ಕೆ ಬಿಜೆಪಿ ಸೊಪ್ಪು ಹಾಕಲಿಲ್ಲ. ಹೀಗಾಗಿ ದಿಂಗಾಲೇಶ್ವರ ಸ್ವಾಮೀಜಿ ಪ್ರಹ್ಲಾದ್​ ಜೋಶಿ ವಿರುದ್ಧ ಹುಬ್ಬಳ್ಳಿ-ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಕಣಕ್ಕೆ ಇಳಿದಿದ್ದರು. ಇವರ ಸ್ಪರ್ಧೆಗೆ ವೀರಶೈವ ಮಹಾಸಭಾ ಬೆಂಬಲ ವ್ಯಕ್ತಪಡಿಸಿತ್ತು. ಆದರೆ ಉತ್ತರ ಕರ್ನಾಟಕ ಪ್ರಮುಖ ಮಠಗಳಲ್ಲಿ ಒಂದಾದ ಧಾರವಾಡದ ಮುರುಘಾ ಮಠದ ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿ ಮಾತ್ರ ದಿಂಗಾಲೇಶ್ವರ ಸ್ವಾಮೀಜಿ ಅವರ ನಿಲುವಿಗೆ ವಿರೋಧ ವ್ಯಕ್ತಪಡಿಸಿದ್ದರು.

Latest Indian news

Popular Stories