ಎಎಪಿ ನೂತನ ರಾಜ್ಯಾಧ್ಯಕ್ಷರಾಗಿ ಮುಖ್ಯಮಂತ್ರಿ ಚಂದ್ರು, ರಾಷ್ಟ್ರೀಯ ಜಂಟಿ ಕಾರ್ಯದರ್ಶಿಯಾಗಿ ಪೃಥ್ವಿರೆಡ್ಡಿ ನೇಮಕ!

ಬೆಂಗಳೂರು:  ಆಮ್ ಆದ್ಮಿ ಪಕ್ಷದ ನೂತನ ರಾಜ್ಯಾಧ್ಯಕ್ಷರಾಗಿ ಹಿರಿಯ ನಟ ಹಾಗೂ ರಾಜಕಾರಣಿ ಮುಖ್ಯಮಂತ್ರಿ ಚಂದ್ರು ಅವರನ್ನು ನೇಮಕ ಮಾಡಲಾಗಿದೆ. ಈವರೆಗೂ ರಾಜ್ಯ ಘಟಕದ ಅಧ್ಯಕ್ಷರಾಗಿದ್ದ ಪೃಥ್ವಿ ರೆಡ್ಡಿ ಅವರನ್ನು ಎಎಪಿ ರಾಷ್ಟ್ರೀಯ ಜಂಟಿ ಕಾರ್ಯದರ್ಶಿಯಾಗಿ,  ನೇಮಕ ಮಾಡಲಾಗಿದೆ.

ರಾಜ್ಯ ಸಂಘಟನಾ ಕಾರ್ಯದರ್ಶಿಗಳಾಗಿ ಬಿಟಿ ನಾಗಣ್ಣ ಮತ್ತು ಅರ್ಜುನ್ ಹಲಗಿಗೌಡ ಅವರನ್ನು ನೇಮಕ ಮಾಡಲಾಗಿದೆ. ಈ ಕುರಿತು ಟ್ವೀಟ್ ಮಾಡಿರುವ ಪೃಥ್ವಿರೆಡ್ಡಿ, ಪಕ್ಷದ ನೂತನ ರಾಜ್ಯಾಧ್ಯಕ್ಷ ನೇಮಕವಾದ ಮುಖ್ಯಮಂತ್ರಿ ಚಂದ್ರು ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ. 

ಅದೇ ರೀತಿ  ಇತ್ತೀಚಿಗೆ ನಡೆದ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಎಎಪಿ ಖಾತೆ ತೆರೆಯಬೇಕೆಂಬ ಉದ್ದೇಶದೊಂದಿಗೆ ರಾಜ್ಯದ ನಾನಾ ಕಡೆಗಳಲ್ಲಿ ಸಂಚರಿಸಿ ಪಕ್ಷ ಸಂಘಟನೆಗೆ ಪ್ರಯತ್ನಿಸಿದ ಪೃಥ್ವಿ ರೆಡ್ಡಿ ಅವರನ್ನು ಎಎಪಿ ರಾಷ್ಟ್ರೀಯ ಜಂಟಿ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ. 

Latest Indian news

Popular Stories