ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಿಗೂಢ ಸ್ಫೋಟ: ಹಲವರಿಗೆ ಗಂಭೀರ ಗಾಯ!

ಬೆಂಗಳೂರು, (ಮಾರ್ಚ್​ 01): ನಗರದ ಇಂದಿರಾನಗರದ ಪ್ರಸಿದ್ಧ ಹೊಟೆಲ್‌ ರಾಮೇಶ್ವರಂ ಕೆಫೆಯಲ್ಲಿ(rameshwaram cafe) ನಿಗೂಢ ವಸ್ತು ಸ್ಫೋಟವಾಗಿದೆ(mysterious explosion). ಘಟನೆಯಲ್ಲಿ ಹಲವರಿಗೆ ಗಾಯಗಳಾಗಿವೆ.

ಸ್ಫೋಟದ ತೀವ್ರತೆಗೆ ರಾಮೇಶ್ವರಂ ಕೆಫೆ ಹಾನಿಯಾಗಿದ್ದು, ಐವರು ಗಂಭೀರ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಗಾಯಾಳುಗಳನ್ನು ಕೂಡಲೇ ಖಾಸಸಿ ಆಸ್ಪತ್ರೆಗೆ ಸಾಗಿಸಲಾಗಿದೆ. ಸ್ಪೋಟವಾಗುತ್ತಿದ್ದಂತೆಯೇ ಜನರು ಭಯಭೀತರಾಗಿ ಓಡಿಡಾಡಿದ್ದು, ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿದೆ.

ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.

Latest Indian news

Popular Stories