ಭೂಕಂಪ ಪೀಡಿತ ಮೊರಾಕ್ಕೊಗೆ ಸಾಧ್ಯವಿರುವ ಎಲ್ಲಾ ನೆರವು ನೀಡಲು ಭಾರತ ಸಿದ್ಧ: ಪ್ರಧಾನಿ ಮೋದಿ

ನವದೆಹಲಿ: ಮೊರಾಕ್ಕೊದಲ್ಲಿ ಸಂಭವಿಸಿದ ಭೂಕಂಪದಲ್ಲಿ ನೂರಾರು ಮಂದಿ ಸಾವನ್ನಪ್ಪಿದ್ದು, ಮೃತರ ಕುಟುಂಬಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸಂತಾಪ ಸೂಚಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಡ್ ಮಾಡಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು, ‘ಮೊರಾಕ್ಕೊದಲ್ಲಿ ಸಂಭವಿಸಿದ ಭೂಕಂಪದಿಂದ ಹಲವರು ಪ್ರಾಣ ಕಳೆದುಕೊಂಡಿದ್ದು, ಇದರಿಂತ ತೀವ್ರ ನೋವಾಗಿದೆ. ನನ್ನ ಆಲೋಚನೆಗಳು ಮೊರೊಕ್ಕೊ ಜನರೊಂದಿಗೆ ಇವೆ. ಇಂತಹ ಕಷ್ಟದ ಸಂದರ್ಭದಲ್ಲಿ ಮೊರಾಕ್ಕೊಗೆ ಸಾಧ್ಯವಿರುವ ಎಲ್ಲಾ ರೀತಿಯ ನೆರವು ನೀಡಲು ಭಾರತ ಸಿದ್ಧವಿದೆ. ಗಾಯಾಳುಗಳು ಶೀಘ್ರಗತಿಯಲ್ಲಿ ಗುಣಮುಖರಾಗಲಿ ಎಂದು ಹೇಳಿದ್ದಾರೆ.

ಮಧ್ಯ ಮೊರಾಕ್ಕೋದಲ್ಲಿ 6.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಪರಿಣಾಮ 600ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ.

ಮೊರಾಕ್ಕೋದಲ್ಲಿ ಸಂಭವಿಸಿದ ಪ್ರಬಲ ಭೂಕಂಪದ ಕೇಂದ್ರಬಿಂದುವು ಹೈ ಅಟ್ಲಾಸ್ ಪರ್ವತಗಳಲ್ಲಿ, 71 ಕಿಮೀ (44 ಮೈಲುಗಳು) ನೈಋತ್ಯ ಮರ್ರಾಕೇಶ್‌ನಲ್ಲಿ, 18.5 ಕಿಮೀ ಆಳದಲ್ಲಿದೆ ಎಂದು ಯುಎಸ್ ಭೂವೈಜ್ಞಾನಿಕ ಸಮೀಕ್ಷೆ ತಿಳಿಸಿದೆ.

Latest Indian news

Popular Stories