ಮಾಜಿ ರಾಷ್ಟ್ರಪತಿ ಅಬ್ದುಲ್ ಕಲಾಮ್ ವಿರುದ್ಧ ಅವಹೇಳನಕಾರಿ ಹೇಳಿಕೆ: ಯತಿ ನರಸಿಂಹಾನಂದ ಸರಸ್ವತಿ ವಿರುದ್ಧ ಪ್ರಕರಣ ದಾಖಲು

ಗಾಜಿಯಾಬಾದ್: ವಿವಾದಾತ್ಮಕ ಹೇಳಿಕೆಗಳಿಗೆ ಹೆಸರುವಾಸಿಯಾಗಿರುವ ದಾಸ್ನಾದೇವಿ ದೇವಸ್ಥಾನದ ಅರ್ಚಕ ಯತಿ ನರಸಿಂಹಾನಂದ ಸರಸ್ವತಿ ವಿರುದ್ಧ ಮಾಜಿ ರಾಷ್ಟ್ರಪತಿ ಅಬ್ದುಲ್ ಕಲಾಂ ಅವರ ಬಗ್ಗೆ ಅಸಹ್ಯಕರ ಹೇಳಿಕೆ ನೀಡಿದ ಆರೋಪದ ಮೇಲೆ ಶನಿವಾರ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಶುಕ್ರವಾರ ರಾತ್ರಿ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ವಿಡಿಯೋ ಕ್ಲಿಪ್ ಆಧರಿಸಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸ್ ಕಮಿಷನರ್ ಅಜಯ್ ಕುಮಾರ್ ಮಿಶ್ರಾ ಪಿಟಿಐಗೆ ತಿಳಿಸಿದ್ದಾರೆ.

16 ಸೆಕೆಂಡ್‌ಗಳ ವೀಡಿಯೊ ಕ್ಲಿಪ್‌ನಲ್ಲಿ ಯತಿ ಮಾಜಿ ರಾಷ್ಟ್ರಪತಿಯ ಬಗ್ಗೆ ಅಸಹ್ಯಕರ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಮುಸ್ಲಿಮರಿಗೆ ಆಕ್ಷೇಪಾರ್ಹ ಭಾಷೆಯನ್ನು ಬಳಸುತ್ತಿದ್ದಾರೆ, ಇದು ದ್ವೇಷವನ್ನು ಭುಗಿಲೆದು ಕೋಮು ಸೌಹಾರ್ದತೆಗೆ ಅಡ್ಡಿಪಡಿಸುವ ಸಾಧ್ಯತೆ ಇದೆ ಎಂದು ಮಿಶ್ರಾ ಹೇಳಿದರು.

ಕ್ಲಿಪ್ ಆಧರಿಸಿ, ಸಬ್ ಇನ್ಸ್‌ಪೆಕ್ಟರ್ ಪ್ರಶಾಂತ್ ಕುಮಾರ್ ಗೌತಮ್ ಅವರು ಇಲ್ಲಿನ ವೇವ್ ಸಿಟಿ ಪೊಲೀಸ್ ಠಾಣೆಯಲ್ಲಿ ಯತಿ ವಿರುದ್ಧ ದೂರು ದಾಖಲಿಸಿದ್ದಾರೆ ಮತ್ತು ನಂತರ ಶನಿವಾರ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Latest Indian news

Popular Stories