ನಾನು ಲೋಕಸಭಾ ಚುನಾವಣೆಯ ಟಿಕೆಟ್ ಆಕಾಂಕ್ಷಿ ಅಲ್ಲ : ನಿಖಿಲ್ ಕುಮಾರಸ್ವಾಮಿ ಸ್ಪಷ್ಟನೆ

ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ನಾನು ಈ ಬಾರಿ ಸ್ಪರ್ಧಿಸುತ್ತಿಲ್ಲ ಹಾಗಾಗಿ ನಾನು ಟಿಕೆಟ್ ಆಕಾಂಕ್ಷಿ ಅಲ್ಲ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸ್ಪಷ್ಟನೇ ನೀಡಿದರು.

ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ವಿಚಾರವಾಗಿ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಯಾವುದೇ ರೀತಿಯಾಗಿ ಈ ವಿಷಯದಲ್ಲಿ ಯೂಟರ್ ಹೊಡೆಯುವುದಿಲ್ಲ ನನ್ನ ನಿರ್ಧಾರದಲ್ಲಿ ಸ್ಪಷ್ಟತೆ ಇದೆ ಚುನಾವಣೆಯಲ್ಲಿ ಪಾಲ್ಗೊಳ್ಳಬೇಕು ಅಂತ ಮುಖಂಡರು ಒತ್ತಾಯಿಸಿದರು.ಈ ಕಾರಣದಿಂದ ನಾನು ಮಂಡ್ಯ ಭಾಗದಲ್ಲಿ ಓಡಾಡಿದ್ದೆ ಎಂದು ತಿಳಿಸಿದರು.

ನನ್ನ ಗಮನ 28 ಕ್ಷೇತ್ರಗಳ ಮೇಲು ಇರುತ್ತದೆ. ನನ್ನ ಸ್ಪರ್ಧೆಗೆ ಸಹಜವಾಗಿ ಮಂಡೆ ಮುಖಂಡರ ಒತ್ತಾಯ ಇದೆ.ಮಂಡ್ಯ ಕ್ಷೇತ್ರದ ಬಿಜೆಪಿ ಟಿಕೆಟ್ ಗೆ ಸುಮಲತ ಒತ್ತಾಯ ವಿಚಾರ ಏನೇ ಪ್ರಶ್ನೆ ಕೇಳಿದರು ಎಲ್ಲದಕ್ಕೂ ಕಾಲವೇ ಉತ್ತರಿಸುತ್ತದೆ. ಎಂದು ಅವರು ತಿಳಿಸಿದರು.

ಅಮಿತ್ ಶಾ ಅವರನ್ನು ಎಚ್ ಡಿ ಕುಮಾರಸ್ವಾಮಿ ಭೇಟಿಯಾಗುತ್ತಿಲ್ಲ. ಷಾ ಭಾಗವಹಿಸಲಿದ್ದ ಕಾರ್ಯಕ್ರಮದಿಂದ ಹೆಚ್‍ಡಿ ಕುಮಾರಸ್ವಾಮಿ ದೂರ ಉಳಿದಿದ್ದಾರೆ. ಈ ಕುರಿತು ನಿಖಿಲ್ ಕುಮಾರಸ್ವಾಮಿ ತಿಳಿಸಿದ್ದು ಅನಾರೋಗ್ಯದ ಹಿನ್ನೆಲೆಯಲ್ಲಿ ಅವರು ಕಾರ್ಯಕ್ರಮಕ್ಕೆ ಆಗಮಿಸುತ್ತಿಲ್ಲ ಎಂದು ತಿಳಿಸಿದರು.

Latest Indian news

Popular Stories