
Featured StoryNational
ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ NEET UG 2026 ಮೇ 3 ರ ಪರೀಕ್ಷೆ ರದ್ದು; ದಿನಾಂಕಗಳನ್ನು ಶೀಘ್ರದಲ್ಲೇ ಪರಿಷ್ಕರಣೆ – NTA
ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ, NEET UG 2026 ಅನ್ನು ರದ್ದುಗೊಳಿಸಿದೆ.
3 ರಂದು 24 ಲಕ್ಷಕ್ಕೂ ಹೆಚ್ಚು ವೈದ್ಯಕೀಯ ಆಕಾಂಕ್ಷಿಗಳಿಗೆ ಪರೀಕ್ಷೆಯನ್ನು ನಡೆಸಲಾಯಿತು. ಪರೀಕ್ಷೆ ಮುಗಿದ ಕೂಡಲೇ, ಸಾಮಾಜಿಕ ಮಾಧ್ಯಮಗಳಲ್ಲಿ ಪತ್ರಿಕೆ ಸೋರಿಕೆಯಾಗಿದೆ ಎಂಬ ಆರೋಪಗಳು ಕೇಳಿಬಂದವು. ಪರೀಕ್ಷೆಯಲ್ಲಿ ಸುಮಾರು 60 ಪ್ರಶ್ನೆಗಳು ರಾಜಸ್ಥಾನದಲ್ಲಿ ವಿತರಿಸಲಾದ ಊಹೆ ಪತ್ರಿಕೆಗಳಿಗೆ ಹೊಂದಿಕೆಯಾಗುತ್ತವೆ ಎಂದು ಹೇಳಿದಾಗ ವಿವಾದ ಉಲ್ಬಣಗೊಂಡಿತ್ತು.
ಇದೀಗ NEET ಪರೀಕ್ಷೆಯನ್ನು ರದ್ದು ಮಾಡಲಾಗಿದ್ದು ಮುಂದಿನ ದಿನಾಂಕವನ್ನು ಘೋಷಿಸಲಿದೆ.




