NEET ರದ್ದತಿಯಿಂದ ಲಕ್ಷಾಂತರ ವಿದ್ಯಾರ್ಥಿಗಳ ಮೇಲೆ ಪರಿಣಾಮ: ಧರ್ಮೇಂದ್ರ ಪ್ರಧಾನ್

ನವದೆಹಲಿ: ಎನ್ಇಇಟಿ (NEET) ರದ್ದು ಮಾಡದೇ ಇರಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಪ್ರಶ್ನೆ ಪತ್ರಿಕೆ ಸೋರಿಯ ಹಿನ್ನೆಲೆಯಲ್ಲಿ ಎನ್ಇಇಟಿ ಪರೀಕ್ಷೆಯ ಕುರಿತು ದೇಶವ್ಯಾಪಿ ಚರ್ಚೆ ನಡೆಯುತ್ತಿದೆ.

ಈ ಬಗ್ಗೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್, ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಸೀಮಿತ ಸಂಖ್ಯೆಯ ವಿದ್ಯಾರ್ಥಿಗಳ ಮೇಲೆ ಮಾತ್ರ ಪರಿಣಾಮ ಬೀರಿದೆ. 2004 ಮತ್ತು 2015 ರ ಹಿಂದಿನ ಘಟನೆಗಳೊಂದಿಗೆ ಹೋಲಿಕೆ ಮಾಡಿದರೆ, ಈ ಘಟನೆ ತೀವ್ರವಾಗಿ ವ್ಯತಿರಿಕ್ತವಾಗಿದೆ. ಆಗಿನ ಪರಿಸ್ಥಿತಿಯಲ್ಲಿ ವ್ಯಾಪಕವಾದ ಪ್ರಶ್ನೆ ಪತ್ರಿಕೆಗಳ ಸೋರಿಕೆಗಳು ಪರೀಕ್ಷೆಯ ರದ್ದತಿಗೆ ಕಾರಣವಾಯಿತು ಎಂದು ವಿವರಿಸಿದ್ದಾರೆ.

ಪರೀಕ್ಷೆಗಳನ್ನು ರದ್ದು ಮಾಡಿದರೆ, ಲಕ್ಷಾಂತರ ವಿದ್ಯಾರ್ಥಿಗಳ ಮೇಲೆ ಪರಿಣಾಮ ಉಂಟಾಗುತ್ತದೆ ಆದ್ದರಿಂದ ಪರೀಕ್ಷೆಗಳನ್ನು ರದ್ದುಗೊಳಿಸುವುದಕ್ಕೆ ಸಾಧ್ಯವಿಲ್ಲ ಎಂದು ಪ್ರಧಾನ್ ಹೇಳಿದ್ದಾರೆ.

ಎನ್ ಡಿಟಿವಿ ವರದಿಯ ಪ್ರಕಾರ, ಸುಪ್ರೀಂ ಕೊರ್ಟ್ ನಲ್ಲಿ NEET ವಿಷಯವಾಗಿ ವಿಚಾರಣೆ ನಡೆಯುತ್ತಿದೆ. ಕೋರ್ಟ್ ತೀರ್ಪು ಅಂತಿಮವಾಗಿರಲಿದೆ ಎಂದು ಸಚಿವರು ಹೇಳಿದ್ದಾರೆ. ಇನ್ನು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಅವ್ಯವಹಾರಗಳು ಮತ್ತು ಅಕ್ರಮಗಳನ್ನು ತಡೆಯುವ ಗುರಿಯನ್ನು ಹೊಂದಿರುವ ಕಠಿಣ ಕಾನೂನನ್ನು ಕೇಂದ್ರ ಸರ್ಕಾರ ಜಾರಿಗೊಳಿಸಿದೆ. ಹೊಸ ಕಾನೂನು ಜೂ.21 ರಿಂದಲೇ ಜಾರಿಗೆ ಬಂದಿದೆ.

Latest Indian news

Popular Stories