
ನೇಜಾರು ಕೊಲೆ ಪ್ರಕರಣ: ಶಂಕಿತ ಆರೋಪಿ ವಶಕ್ಕೆ?
ಉಡುಪಿ, ನ.14: ಮಹತ್ವದ ಪ್ರಗತಿಯೊಂದರಲ್ಲಿ ನಾಲ್ವರನ್ನು ಬರ್ಬರವಾಗಿ ಹತ್ಯೆಗೈದ ದುಷ್ಕರ್ಮಿಯನ್ನು ಉಡುಪಿ ಪೊಲೀಸರು ಯಶಸ್ವಿಯಾಗಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ತಿಳಿದು ಬಂದಿದೆ. ಅದರೆ ಪೊಲೀಸರು ಅಧಿಕೃತವಾಗಿ ಇನ್ನಷ್ಟೇ ಧೃಡ ಪಡಿಸಬೇಕಾಗಿದೆ.
ಸಿಸಿಟಿವಿ ದೃಶ್ಯಾವಳಿಗಳನ್ನು ಬಳಸಿಕೊಂಡು, ಪೊಲೀಸ್ ಅಧಿಕಾರಿಗಳು ಶಂಕಿತನನ್ನು ಪತ್ತೆಹಚ್ಚಿದ್ದಾರೆ ತಕ್ಷಣವೇ ಆತನನ್ನು ಕಸ್ಟಡಿಗೆ ತೆಗೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.
ಉಡುಪಿ ಡಿವೈಎಸ್‌ಪಿ ದಿನಕರ್ ಪಿ, ನೇತೃತ್ವದ ತಂಡ ಕೇರಳಕ್ಕೆ ತೆರಳಿದ್ದು, ಕೇರಳದ ಕೊಟ್ಟಾಯಮ್’ನಿಂದ ಆರೋಪಿಯನ್ನು ಬಂಧಿಸಿ ಕರೆತರುವ ಸಾಧ್ಯತೆಗಳಿವೆ.
ಉಡುಪಿ ಜಿಲ್ಲೆಯ ನೇಜಾರಿನಲ್ಲಿ ಭಾನುವಾರ ಬೆಳ್ಳಂಬೆಳಗ್ಗೆ ನಡೆದ ಆಘಾತಕಾರಿ ಘಟನೆಯಲ್ಲಿ ಅಪರಿಚಿತ ದುಷ್ಕರ್ಮಿಯೊಬ್ಬ ನಾಲ್ವರನ್ನು ಹತ್ಯೆಗೈದಿದ್ದ.
ನವೆಂಬರ್ 14, ಮಂಗಳವಾರ ಬೆಳಿಗ್ಗೆ ಗೃಹ ಸಚಿವ ಜಿ ಪರಮೇಶ್ವರ್ ಅವರು ಸಂತ್ರಸ್ತ ಕುಟುಂಬದ ಮುಖ್ಯಸ್ಥ ನೂರ್ ಮೊಹಮ್ಮದ್ ಅವರೊಂದಿಗೆ ಖುದ್ದಾಗಿ ಮಾತನಾಡಿ, ಶೀಘ್ರ ಬಂಧಿಸುವ ಭರವಸೆ ನೀಡಿದರು.
ಪೊಲೀಸ್ ಮೂಲಗಳ ಪ್ರಕಾರ, ಶಂಕಿತನನ್ನು ಬಂಧಿಸಲಾಗಿದ್ದು, ತನಿಖೆಯನ್ನು ಮುಂದುವರಿಸಲಾಗಿದೆ.




