
Featured StoryUdupi
ನೇಜಾರು ಕೊಲೆ ಪ್ರಕರಣ: ಮಹಜರು ಸಂದರ್ಭದಲ್ಲಿ ರಸ್ತೆ ತಡೆದು ಪ್ರತಿಭಟನೆ
ನೇಜಾರು ಕೊಲೆ ಪ್ರಕರಣದ ಆರೋಪಿಯನ್ನು ಮಹಜರು ಮಾಡಲು ನೇಜಾರು ಕೊಲೆ ನಡೆದ ಸ್ಥಳಕ್ಕೆ ಕರೆ ತರಲಾಗಿತ್ತು. ಈ ಸಂದರ್ಭದಲ್ಲಿ ಆಕ್ರೋಶಿತ ಜನ ಪ್ರತಿಭಟನೆ ನಡೆಸಿದರು.
ತಕ್ಷಣ ಕಾರ್ಯ ಪ್ರವೃತ್ತರಾದ ಪೊಲೀಸರು ಲಘು ಲಾಠಿ ಚಾರ್ಜ್ ನಡೆಸಿ ಆಕ್ರೋಶಿತ ಗುಂಪನ್ನು ಚದುರಿಸಿದರು.
ಈ ಸಂದರ್ಭದಲ್ಲಿ ಆರೋಪಿಯನ್ನು ಗಲ್ಲಿಗೇರಿಸಿ ಎಂದು ರಸ್ತೆ ತಡೆದು ಪ್ರತಿಭಟನೆ ನಡೆಸಿದರು. ಡಿವೈಎಸ್ಪಿ ದಿನಕರ ನೇತೃತ್ವದಲ್ಲಿ ಮಹಜರಿಗೆ ಆಗಮಿಸಿದ್ದರು. ಈ ಸಂದರ್ಭದಲ್ಲಿ ಬೆಳಗಿನಿಂದ ಕಾಯುತ್ತಿದ್ದ ಆಕ್ರೋಶಿತ ಗುಂಪು ಆರೋಪಿಯ ಮೇಲೆ ದಾಳಿಗೆ ಯತ್ನ ನಡೆಸಿದಾಗ ಲಘು ಲಾಠಿ ಚಾರ್ಜ್ ನಡೆಸಿ ಗುಂಪು ಚದುರಿಸಿದ್ದಾರೆ.




